ಹೆಚ್ಚಿದ ಕೋವಿಡ್ ಆತಂಕ: ದೇಶದಲ್ಲಿಂದು 796 ಹೊಸ ಪ್ರಕರಣಗಳು ಪತ್ತೆ, 4 ತಿಂಗಳ ಗರಿಷ್ಠ
ಭಾರತದಲ್ಲಿ ಶುಕ್ರವಾರ 796 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು 4 ತಿಂಗಳ ದಾಖಲೆಯಾಗಿದೆ. ಕಳೆದ 24 ಗಂಟೆಗಳಲ್ಲಿ 5 ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ.

ನವದೆಹಲಿ: ಭಾರತದಲ್ಲಿ ಶುಕ್ರವಾರ 796 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು 4 ತಿಂಗಳ ದಾಖಲೆಯಾಗಿದೆ. ಕಳೆದ 24 ಗಂಟೆಗಳಲ್ಲಿ 5 ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,93,506ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,795ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,026ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,57,685ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 98,727 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,01,11,661 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,64,88,543ೃ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


