ಲೈಂಗಿಕ ದೌರ್ಜನ್ಯ ಹೇಳಿಕೆ: ನೋಟಿಸ್ ನೀಡಲು ಬಂದ ಪೊಲೀಸರ 3 ಗಂಟೆ ಕಾಯುವಂತೆ ಮಾಡಿದ ರಾಹುಲ್ ಗಾಂಧಿ!
ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೊಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನವದೆಹಲಿ: ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೊಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಭಾರತ್ ಜೋಡೋ ಯಾತ್ರೆ ವೇಳೆ 'ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಈ ನೋಟಿಸ್ ಜಾರಿಗಾಗಿ ರಾಹುಲ್ ಗಾಂಧಿ ಅವರ ದೆಹಲಿ ನಿವಾಸಕ್ಕೆ ತೆರಳಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಸುಮಾರು 3 ಗಂಟೆ ಕಾದಿದ್ದಾರೆ ಎನ್ನಲಾಗಿದೆ. ಮೂರು ಗಂಟೆ ಕಾದರೂ ಪೊಲೀಸ್ ತಂಡವನ್ನು ರಾಹುಲ್ ಗಾಂಧಿ ಭೇಟಿ ಮಾಡಲಿಲ್ಲ. ಬಳಿಕ ಒಂದೂವರೆ ಗಂಟೆಗಳ ನಂತರ ವೈಯಕ್ತಿಕವಾಗಿ ರಾಹುಲ್ ಗಾಂಧಿ ನೋಟಿಸ್ ಸ್ವೀಕರಿಸಿದರು ಎನ್ನಲಾಗಿದೆ.
ಈ ವರ್ಷದ ಜನವರಿಯಲ್ಲಿ ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ವಿವರಗಳನ್ನು ಕೋರಿ ದೆಹಲಿ ಪೊಲೀಸರು ಬುಧವಾರ ಕಾಂಗ್ರೆಸ್ ನಾಯಕನಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಒಂದು ನಿರ್ದಿಷ್ಟ ಪ್ರಕರಣದಲ್ಲಿ ಒಬ್ಬ ಹುಡುಗಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಆ ಸಂದರ್ಭದಲ್ಲಿ ನಾನು ಪೊಲೀಸರಿಗೆ ಕರೆ ಮಾಡಬೇಕೇ ಎಂದು ಪ್ರಶ್ನಿಸಿದೆ. ಆದರೆ ಪೊಲೀಸರಿಗೆ ಕರೆ ಮಾಡಬೇಡಿ. ಅದರಿಂದ ನನಗೆ ಅವಮಾನವಾಗುತ್ತದೆ ಎಂದು ಆಕೆ ಹೇಳಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


