ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ, ಪ್ರಶ್ನಿಸಿದ ಮಹಿಳೆಯನ್ನು ಥಳಿಸಿದ ಬಿಎಸ್ಎಫ್ ನಿವೃತ್ತ ಯೋಧ
ತನ್ನ ಎರಡು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ನಿವೃತ್ತ ಯೋಧರೊಬ್ಬರು ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ನಾಗ್ಪುರ: ತನ್ನ ಎರಡು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ನಿವೃತ್ತ ಯೋಧರೊಬ್ಬರು ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಶಿವಶಂಕರ್ ಶ್ರೀವಾಸ್ತವ ಎಂದು ಗುರುತಿಸಲಾಗಿದ್ದು, ಆತನ ಮೇಲೆ ಕಿರುಕುಳ ಮತ್ತು ಹಲ್ಲೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ಜರಿಪಟ್ಕಾ ಪ್ರದೇಶದ ಭೀಮ್ ಚೌಕ್ನಲ್ಲಿ ಶ್ರೀವಾಸ್ತವ್ ಅವರ ಕಾರು ಮಹಿಳೆಯ ದ್ವಿಚಕ್ರ ವಾಹನವನ್ನು ಹಿಂದಿನಿಂದ ತಳ್ಳಿದ ನಂತರ ಈ ಘಟನೆ ಸಂಭವಿಸಿದೆ.
ಈ ವೇಳೆ ಮಹಿಳೆ ಹೇಗೋ ತನ್ನ ಸ್ಕೂಟರ್ ಅನ್ನು ನಿಯಂತ್ರಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದ್ವಿಚಕ್ರ ವಾಹನ ನಿಲ್ಲಿಸಿ ಕಾರಿನ ಚಿತ್ರವನ್ನು ಕ್ಲಿಕ್ಕಿಸಿದ್ದಾರೆ. ಬಳಿಕ, ಕಾರು ಚಲಿಸದಂತೆ ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಶ್ರೀವಾಸ್ತವ್ ಕೋಪಗೊಂಡು ಕಾರಿನಿಂದ ಇಳಿದಿದ್ದಾರೆ. ಬಳಿಕ, ಮಹಿಳೆಯನ್ನು ನಿರ್ದಯವಾಗಿ ಥಳಿಸಲು ಪ್ರಾರಂಭಿಸಿದ್ದಾರೆ. ಇತರ ಜನರು ಸ್ಥಳಕ್ಕೆ ಧಾವಿಸಿ ವ್ಯಕ್ತಿಯನ್ನು ತಡೆದಿದ್ದಾರೆ ಎಂದು ಅಧಿಕಾರಿ ಹೇಳಿದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶ್ರೀವಾಸ್ತವ್ ಅವರನ್ನು ಠಾಣೆಗೆ ಕರೆದೊಯ್ದು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಆರೋಪಿಯು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದಾಗಿ ಆತನ ಸಂಬಂಧಿಕರು ಪೊಲೀಸರಿಗೆ ತಿಳಿಸಿದ ನಂತರ ಪೊಲೀಸರು ನೋಟಿಸ್ನೊಂದಿಗೆ ಬಿಡುಗಡೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


