ದೇಶ

ಹಿಂದೂ ಹೆಣ್ಣು ಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುತ್ತೇವೆ: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ

ಸನಾತನ ಧರ್ಮಕ್ಕೆ ಸೇರಿದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

ಹಿಂದೂ ಹೆಣ್ಣು ಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುತ್ತೇವೆ: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ
ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ
Published On :

ಪಾಟ್ನಾ: ಸನಾತನ ಧರ್ಮಕ್ಕೆ ಸೇರಿದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

'ಸನಾತನ ಧರ್ಮದ ಹೆಣ್ಣುಮಕ್ಕಳು ನಮ್ಮ ದೇಶದ ಹೆಣ್ಣುಮಕ್ಕಳು. ಯಾರು ಅವರ ಗೌರವ ಮತ್ತು ಘನತೆಯೊಂದಿಗೆ ಆಟವಾಡುತ್ತಾರೋ ಅಂತವರ ಕೈಗಳನ್ನು ಕತ್ತರಿಸುತ್ತೇನೆ. ಒಂದು ವೇಳೆ, ಆರ್‌ಜೆಡಿ ನಾಯಕರು ತಮ್ಮ ಹೆಣ್ಣು ಮಕ್ಕಳನ್ನು (ಮದುವೆಗಾಗಿ) ಇತರ ಸಮುದಾಯದ ಜನರಿಗೆ ನೀಡುವುದಾದರೆ, ಅವರು ಹಾಗೆ ಮಾಡಲು ಸ್ವತಂತ್ರರು. ಭಾರತವು ಹಿಂದೂ ರಾಷ್ಟ್ರವಾಗಿದೆ ಮತ್ತು ಅದು ಹಾಗೆಯೇ ಉಳಿಯುತ್ತದೆ' ಎಂದು ಚೌಬೆ ಶನಿವಾರ ಹೇಳಿದರು.

'ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ಪುತ್ರಿಯರು ಮುಸ್ಲಿಂ ಪುರುಷರನ್ನು ಮದುವೆಯಾಗಿದ್ದಾರೆ. ಬಿಜೆಪಿ ನಾಯಕರು ತಮ್ಮ ಪುತ್ರಿಯರನ್ನು ಮುಸ್ಲಿಮರಿಂದ ರಕ್ಷಿಸಬೇಕು' ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಶಾಸಕ ಭಾಯಿ ವೀರೇಂದ್ರ ಹೇಳಿಕೆ ನೀಡಿದ ಒಂದು ದಿನದ ನಂತರ ಸಚಿವರ ಈ ಹೇಳಿಕೆ ಹೊರಬಿದ್ದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಮತ್ತೊಬ್ಬ ಎಂಎಲ್‌ಸಿ ಸಂತೋಷ್ ಸಿಂಗ್, 'ಆರ್‌ಜೆಡಿ ನಾಯಕರು ಮಾನಸಿಕವಾಗಿ ದಿವಾಳಿಯಾಗಿದ್ದಾರೆ. ಯಾವುದೇ ಮುಸ್ಲಿಂ ಯುವಕರು ಹಿಂದೂ ಸಮುದಾಯದ ಹೆಣ್ಣುಮಕ್ಕಳ ಕಡೆಗೆ ಬೆರಳು ತೋರಿಸಿದರೆ, ನಾನು ಅವರ ಬೆರಳನ್ನು ಕತ್ತರಿಸುತ್ತೇನೆ' ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.