ದೇಶ

ಅಬಕಾರಿ ನೀತಿ ಪ್ರಕರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಅಬಕಾರಿ ನೀತಿ ಪ್ರಕರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ
ಮನೀಶ್ ಸಿಸೋಡಿಯಾ
Published On :

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ವಿಶೇಷ ನ್ಯಾಯಾಧೀಶ ಎಂಕೆ ನಾಗ್‌ಪಾಲ್ ಅವರು ಹಿರಿಯ ಎಎಪಿ ನಾಯಕನನ್ನು ಏಪ್ರಿಲ್ 5 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಪ್ರಕರಣದ ಕಸ್ಟಡಿ ವಿಚಾರಣೆಯ ಮುಗಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಹಾಜರುಪಡಿಸಿತ್ತು.

ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಿಸೋಡಿಯಾ ಅವರನ್ನು ಏಳು ದಿನಗಳ ಕಾಲ ತನ್ನ ಕಸ್ಟಡಿಯಲ್ಲಿ ವಿಚಾರಣೆ ನಡೆಸಿತ್ತು. ಸಿಬಿಐ ತನಿಖೆ ನಡೆಸುತ್ತಿರುವ ಪ್ರಮುಖ ಪ್ರಕರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಲಯವು ಮಂಗಳವಾರ ಮಾರ್ಚ್ 25ಕ್ಕೆ ಮುಂದೂಡಿದೆ.

ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಫೆಬ್ರವರಿ 26ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು. ಸಿಬಿಐ ತನಿಖೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಾರ್ಚ್ 9ರಂದು ತಿಹಾರ್ ಜೈಲಿನಿಂದ ಸಿಸೋಡಿಯಾ ಅವರನ್ನು ವಶಕ್ಕೆ ಪಡೆದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.