ಆರು ತಿಂಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿ: ನಿತಿನ್ ಗಡ್ಕರಿ
ಮುಂದಿನ 6 ತಿಂಗಳಲ್ಲಿ ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಲಾಗುವುದು....

ನವದೆಹಲಿ: ಮುಂದಿನ 6 ತಿಂಗಳಲ್ಲಿ ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಹೇಳಿದ್ದಾರೆ.
ಈ ಕ್ರಮವು ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಹೆದ್ದಾರಿಗಳಲ್ಲಿ ಪ್ರಯಾಣಿಸಿದ ನಿಖರವಾದ ದೂರಕ್ಕೆ ಶುಲ್ಕ ವಿಧಿಸುವ ಗುರಿಯನ್ನು ಹೊಂದಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
ಕೈಗಾರಿಕಾ ಸಂಸ್ಥೆ ಸಿಐಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಸರ್ಕಾರಿ ಸ್ವಾಮ್ಯದ ಎನ್ಎಚ್ಎಐನ ಟೋಲ್ ಆದಾಯವು ಪ್ರಸ್ತುತ ರೂ 40,000 ಕೋಟಿಗಳಷ್ಟಿದೆ ಮತ್ತು ಇದು 2-3 ವರ್ಷಗಳಲ್ಲಿ ರೂ 1.40 ಲಕ್ಷ ಕೋಟಿಗೆ ಏರಿಕೆಯಾಗಲಿದೆ ಎಂದು ಹೇಳಿದರು.
"ದೇಶದಲ್ಲಿರುವ ಟೋಲ್ ಪ್ಲಾಜಾಗಳನ್ನು ಬದಲಾಯಿಸಲು ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುವುದು. ನಾವು ಮುಂದಿನ ಆರು ತಿಂಗಳಲ್ಲಿ ಈ ಹೊಸ ತಂತ್ರಜ್ಞಾನವನ್ನು ಅಳವಡಿಸುತ್ತೇವೆ" ಎಂದು ತಿಳಿಸಿದರು.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ವಾಹನಗಳನ್ನು ನಿಲ್ಲಿಸದೆ ಸ್ವಯಂಚಾಲಿತ ಟೋಲ್ ಸಂಗ್ರಹವನ್ನು ಸಕ್ರಿಯಗೊಳಿಸಲು ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆ (ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳು)ಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


