ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಭಾರತದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದು ಕಾಂಗ್ರೆಸ್ ಟೀಕೆ
ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾನೂನು ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಹೇಳಿದೆ.

ನವದೆಹಲಿ: ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾನೂನು ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಹೇಳಿದೆ.
ಇದನ್ನೂ ಓದಿ: ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದರಿಗೆ ಬಿಗ್ ಶಾಕ್: ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ನಾವು ಹೆದರುವುದು ಅಥವಾ ಮೌನವಾಗಿರುವುದಿಲ್ಲ, ಪ್ರಧಾನಿ ಮೋದಿ- ಅದಾನಿ ನಡುವಿನ ಮಹಾ ಮೆಗಾ ಹಗರಣದ ಬಗ್ಗೆ ಜೆಪಿಸಿ ತನಿಖೆಗೆ ವಹಿಸುವ ಬದಲು ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ಭಾರತದ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದಿದ್ದಾರೆ.
ರಾಹುಲ್ ಗಾಂಧಿ ವಿರುದ್ಧದ ಕ್ರಮದಿಂದ ದಿಗ್ಭ್ರಮೆಗೊಂಡಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ರಾಜಕೀಯ ಕಾರಣದಿಂದ ಹೀಗೆ ಮಾಡಲಾಗಿದ್ದು, ನಮ್ಮ ಪ್ರಜಾಪ್ರಭುತ್ವಕ್ಕೆ ಕೆಟ್ಟದ್ದನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


