ರಾಹುಲ್ ಗಾಂಧಿ ಅನರ್ಹತೆ ಖಂಡಿಸಿದ ಮಮತಾ ಬ್ಯಾನರ್ಜಿ
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಕೋಲ್ಕತಾ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖಂಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ ಅವರು, ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ದೇಶ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಭಾರತದಲ್ಲಿ ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಮುಖ ಟಾರ್ಗೆಟ್ ಆಗಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಬಿಜೆಪಿ ನಾಯಕರನ್ನು ಕ್ಯಾಬಿನೆಟ್‌ಗೆ ಸೇರಿಸಿಕೊಂಡರೆ, ವಿರೋಧ ಪಕ್ಷದ ನಾಯಕರನ್ನು ಅವರ ಭಾಷಣಕ್ಕಾಗಿ ಅನರ್ಹಗೊಳಿಸಲಾಗಿದೆ" ಎಂದು ಟಿಎಂಸಿ ಮುಖ್ಯಸ್ಥೆ ಟ್ವೀಟ್ ಮಾಡಿದ್ದಾರೆ.
ಗುರುವಾರ, ಸೂರತ್‌ನ ನ್ಯಾಯಾಲಯ, ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


