ದೇಶ

36 ಉಪಗ್ರಹಗಳನ್ನು ಹೊತ್ತ ಇಸ್ರೋದ ಎಲ್ ವಿಎಂ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭ

ಎಲ್‌ವಿಎಂ3-ಎಂ3/ಒನ್‌ವೆಬ್ ಇಂಡಿಯಾ-2 ಮಿಷನ್‌ನಲ್ಲಿ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಶನಿವಾರ ತಿಳಿಸಿದೆ.

36 ಉಪಗ್ರಹಗಳನ್ನು ಹೊತ್ತ ಇಸ್ರೋದ ಎಲ್ ವಿಎಂ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭ
ಎಲ್ ವಿಎಂ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭ
Published On :

ಶ್ರೀಹರಿಕೋಟ: ಎಲ್‌ವಿಎಂ3-ಎಂ3/ಒನ್‌ವೆಬ್ ಇಂಡಿಯಾ-2 ಮಿಷನ್‌ನಲ್ಲಿ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಶನಿವಾರ ತಿಳಿಸಿದೆ.

ಉಪಗ್ರಹ ವಾಹಕವನ್ನು ಲಾಂಚ್ ಪ್ಯಾಡ್‍ಗೆ ಸ್ಥಳಾಂತರಿಸಲಾಗಿದ್ದು, ಮಾರ್ಚ್ 26 ರಂದು 36 ಬ್ರಾಡ್‍ಬ್ಯಾಂಡ್ ಉಪಗ್ರಹಗಳೊಂದಿಗೆ ಕಕ್ಷೆಗೆ ಹಾರಿಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 36 ಉಪಗ್ರಹಗಳನ್ನು ಹೊತ್ತ ಎಲ್ ವಿಎಂ ರಾಕೆಟ್ ಉಡಾವಣೆ ನಡೆಯಲಿದ್ದು, ಇದರಲ್ಲಿ ಬ್ರಿಟನ್ ಸಹಯೋಗವೂ ಇದೆ ಎಂದು ಇಸ್ರೋ ಹೇಳಿದೆ.

ಒನ್ ವೆಬ್ ಎನ್ನುವುದು ಒಂದು ಸಂಸ್ಥೆಯಾಗಿದ್ದು, ಇದು ಲೋ ಅರ್ತ್ ಆರ್ಬಿಟ್ (ಎಲ್ಇಓ) ಉಪಗ್ರಹಗಳ ಮೂಲಕ ಉಪಗ್ರಹ ಸಂವಹನ ವ್ಯವಸ್ಥೆಯನ್ನು ಒದಗಿಸುತ್ತದೆ. ಈ ಸಂಸ್ಥೆಯು ತನ್ನ 36 ಉಪಗ್ರಹಗಳ ಉಡಾವಣೆಯನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮಾರ್ಚ್ 26 ರಂದು ಉಡಾವಣೆಗೊಳಿಸಲಿದೆ.

ಈ ಉಡಾವಣೆಯು ಒನ್ ವೆಬ್ ಸಂಸ್ಥೆಯ 18ನೇ ಉಡಾವಣೆಯಾಗಿದ್ದು, 2023ರಲ್ಲಿ ಮೂರನೇ ಉಡಾವಣೆಯಾಗಲಿದೆ. ಈ ಉಡಾವಣೆಯ ಮೂಲಕ ಒನ್ ವೆಬ್‌ನ ಮೊದಲ ತಲೆಮಾರಿನ ಎಲ್ಇಓ ಪುಂಜ ಪೂರ್ಣಗೊಳ್ಳಲಿದ್ದು, ಇದರ ಪರಿಣಾಮವಾಗಿ 2023ರಲ್ಲಿ ಜಾಗತಿಕ ವ್ಯಾಪ್ತಿ ಆರಂಭಿಸಲು ಸಂಸ್ಥೆಗೆ ಸಾಧ್ಯವಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.