ಯೋಗಿ ಆದಿತ್ಯನಾಥ್ ಹೊಸ ದಾಖಲೆ: ಸತತ ಆರು ವರ್ಷ ಅಧಿಕಾರ ಪೂರ್ಣಗೊಳಿಸಿದ ಉತ್ತರ ಪ್ರದೇಶದ ಮೊದಲ ಸಿಎಂ
2017 ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಯೋಗಿ ಆದಿತ್ಯನಾಥ್ ಅವರು ಸತತ ಆರು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ ರಾಜ್ಯದ ಏಕೈಕ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಲಖನೌ: 2017 ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಯೋಗಿ ಆದಿತ್ಯನಾಥ್ ಅವರು ಸತತ ಆರು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ ರಾಜ್ಯದ ಏಕೈಕ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕಳೆದ ವರ್ಷ ಮಾರ್ಚ್ 2022 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 255 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಅವಧಿಗೆ ಅಧಿಕಾರಕ್ಕೇರಿದ ಯೋಗಿ ಅಧಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಶವಿವಾರ ಒಂದು ವರ್ಷ ಪೂರ್ಣಗೊಳಿಸಿದೆ.
ಯುಪಿಯ 21ನೇ ಸಿಎಂ ಆಗಿ ಸತತ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಯೋಗಿ ಆದಿತ್ಯನಾಥ್, ಮಾರ್ಚ್ 1, 2023 ರಂದು ಐದು ವರ್ಷ, 346 ದಿನಗಳ ಅಧಿಕಾರವನ್ನು ಪೂರ್ಣಗೊಳಿಸುವ ಮೂಲಕ ಉತ್ತರ ಪ್ರದೇಶದಲ್ಲಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಸಿಎಂ ಎಂಬ ದಾಖಲೆ ಬರೆದಿದ್ದಾರೆ.
ಯೋಗಿಗಿಂತ ಮೊದಲು, ಕಾಂಗ್ರೆಸ್ನ ಡಾ.ಸಂಪೂರ್ಣಾನಂದ ಅವರು 1954 ರಿಂದ 1960 ರವರೆಗೆ 5 ವರ್ಷ ಮತ್ತು 345 ದಿನಗಳ ಕಾಲ ಯುಪಿ ಸಿಎಂ ಆಗಿದ್ದರು.
ಉತ್ತರ ಭಾರತ ಮತ್ತು ನೇಪಾಳದ ಅತ್ಯಂತ ಪೂಜ್ಯ ಕ್ಷೇತ್ರಗಳಲ್ಲಿ ಒಂದಾದ ಗೋರಖನಾಥ ಪೀಠದ ಪ್ರಧಾನ ಅರ್ಚಕ ಯೋಗಿ ಆದಿತ್ಯನಾಥ್ ಅವರು ಬಿಗಿಯಾದ ಆಡಳಿತದ ಜೊತೆಗೆ ದೇಶದ ಅತ್ಯಂತ ನಿರ್ಣಾಯಕ ರಾಜ್ಯದ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರಶಾಹಿಯ ಮೇಲೆ ಹಿಡಿತ ಸಾಧಿಸಿದ್ದಾರೆ.
2017ರಲ್ಲಿ ಯುಪಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ, ರಾಜಕಾರಣಿಗಳು ಮತ್ತು ರಾಜಕೀಯ ವಿಮರ್ಶಕರು ಆಡಳಿತದ ಅನುಭವವಿಲ್ಲದ ವ್ಯಕ್ತಿಗೆ ಸಿಎಂ ಹುದ್ದೆ ನೀಡಲಾಗಿದೆ ಎಂದು ಅವರ ಸಾಮರ್ಥ್ಯವನ್ನು ಅನುಮಾನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


