ಮಾನನಷ್ಟ ಮೊಕದ್ದಮೆ ಪ್ರಕರಣ: ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆಗೆ ಕೋರ್ಟ್ ಸಮನ್ಸ್
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ನಾಯಕ ಮತ್ತು ಸಂಸದ ರಾಹುಲ್ ರಮೇಶ್ ಶೆವಾಲೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ....

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ನಾಯಕ ಮತ್ತು ಸಂಸದ ರಾಹುಲ್ ರಮೇಶ್ ಶೆವಾಲೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
ಇದೇ ಪ್ರಕರಣದಲ್ಲಿ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವತ್ ಅವರಿಗೂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಮತ್ತು ಸಂಜಯ್ ರಾವತ್ ಅವರು ಶಿಂಧೆ ಬಣದ ವಿರುದ್ಧ ಮಾಡಿದ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಶೆವಾಲೆ ಅವರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ.
ಮಾನನಷ್ಟ ಮೊಕದ್ದಮೆಯ ಪ್ರಕಾರ, ಏಕನಾಥ್ ಶಿಂಧೆ ಬಣ ಶಿವಸೇನೆಯ ಮೂಲ ಚಿಹ್ನೆಯನ್ನು 2000 ಕೋಟಿ ರೂ.ಗೆ ಖರೀದಿಸಿದ್ದಾರೆ ಎಂದು ಸಂಜಯ್ ರಾವತ್ ಮತ್ತು ಠಾಕ್ರೆ ಅವರು ಆರೋಪಿಸಿದ್ದರು.
ಶೆವಾಲೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರ ಪೀಠ, ಸಂಜಯ್ ರಾವತ್, ಉದ್ಧವ್ ಮತ್ತು ಆದಿತ್ಯ ಠಾಕ್ರೆ ಅವರಿಗೆ ಸಮನ್ಸ್ ಜಾರಿಗೊಳಿಸಿ, ತನ್ನ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


