EPF ಬಡ್ಡಿ ದರ ಶೇ 8.15ಕ್ಕೆ ಏರಿಕೆ: ಭವಿಷ್ಯ ನಿಧಿ ಸಂಸ್ಥೆ
ಮಹತ್ವದ ಬೆಳವಣಿಗೆಯಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2022-23ನೇ ಸಾಲಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಬಡ್ಡಿ ದರವನ್ನು ಶೇ 8.15ಕ್ಕೆ ಹೆಚ್ಚಿಸಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2022-23ನೇ ಸಾಲಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಬಡ್ಡಿ ದರವನ್ನು ಶೇ 8.15ಕ್ಕೆ ಹೆಚ್ಚಿಸಿದೆ.
2020–21ರಲ್ಲಿ ಶೇ. 8.5ರಷ್ಟಿದ್ದ ಇಪಿಎಫ್ ಬಡ್ಡಿ ದರವನ್ನು ಮಾರ್ಚ್ 2022ರಲ್ಲಿ 2021–22ರ ಅವಧಿಗೆ ನಾಲ್ಕು ದಶಕಗಳಲ್ಲೇ ಕನಿಷ್ಠ ಮಟ್ಟವಾದ ಶೇ. 8.1ಕ್ಕೆ ಇಳಿಸಲಾಗಿತ್ತು. 1977–78ರಿಂದೀಚೆಗೆ(ಶೇ.8ರಷ್ಟಿದ್ದ) ಇದು ಅತ್ಯಂತ ಕಡಿಮೆ ಬಡ್ಡಿದರವಾಗಿತ್ತು.
ಇದೀಗ, ಮಂಗಳವಾರ ನಡೆದ ಇಪಿಎಫ್‌ಒ ಕೇಂದ್ರೀಯ ಮಂಡಳಿಯ ಟ್ರಸ್ಟಿಗಳ(ಸಿಬಿಟಿ) ಸಭೆಯಲ್ಲಿ ಬಡ್ಡಿ ದರವನ್ನು 8.15ಕ್ಕೆ ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು ಸಚಿವಾಲಯದ ಮೂಲಕ ಸರ್ಕಾರವು ಅನುಮೋದಿಸಿದ ನಂತರವೇ EPFO ಬಡ್ಡಿದರವನ್ನು ಒದಗಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


