ದೇಶ

ದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ: 24 ಗಂಟೆಗಳಲ್ಲಿ 1,573 ಹೊಸ ಕೊರೊನಾವೈರಸ್ ಸೋಂಕು ಪತ್ತೆ!

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,573 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ: 24 ಗಂಟೆಗಳಲ್ಲಿ 1,573 ಹೊಸ ಕೊರೊನಾವೈರಸ್ ಸೋಂಕು ಪತ್ತೆ!
ಕೊರೋನಾ ವೈರಸ್ (ಸಂಗ್ರಹ ಚಿತ್ರ)
Published On :

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,573 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದಿನವೊಂದರಲ್ಲಿ ಕೇರಳದಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದು, ಈವರೆಗೆ ಒಟ್ಟು 5,30,841 ಮಂದಿ ಮೃತಪಟ್ಟಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 1.30ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ 1.47 ರಷ್ಟಿದೆ. ಈವರೆಗೆ ದೇಶದಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 4,47,07,525ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಮರಣ ಪ್ರಮಾಣ ಶೇ 1.19 ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.02 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.79 ರಷ್ಟಿದೆ. ದೇಶದಲ್ಲಿ ಒಟ್ಟಾರೆ 4,41,65,703 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 

ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.65 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.