ದ್ರೌಪದಿ ಮುರ್ಮು ಆಯೋಜಿಸಿದ ಉಪಹಾರ ಸಭೆಗೆ ಕಾಂಗ್ರೆಸ್ ಸಂಸದರು ಗೈರು!
ವಿವಿಧ ರಾಜ್ಯಗಳ ಸಂಸದರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಕಾಂಗ್ರೆಸ್ ಸಂಸದರು ಗೈರಾದರು. ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು.

ನವದೆಹಲಿ: ವಿವಿಧ ರಾಜ್ಯಗಳ ಸಂಸದರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಕಾಂಗ್ರೆಸ್ ಸಂಸದರು ಗೈರಾದರು. ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಕೆಲವು ಈಶಾನ್ಯ ರಾಜ್ಯಗಳ ಸಂಸದರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆತಿಥ್ಯ ನೀಡಿದರು. ಉತ್ತರ ಪ್ರದೇಶದ (ಲೋಕಸಭೆ) ರಾಜಸ್ಥಾನ (ಲೋಕಸಭೆ ಮತ್ತು ರಾಜ್ಯಸಭೆ ಎರಡೂ) ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಸಿಕ್ಕಿಂ ರಾಜ್ಯಗಳ ಸಂಸದರನ್ನು ರಾಷ್ಟ್ರಪತಿಗಳು ಆಹ್ವಾನಿಸಿರುವುದಾಗಿ ಮೂಲಗಳು ತಿಳಿಸಿವೆ. ಆದರೆ ಸೋನಿಯಾ ಗಾಂಧಿ ಸೇರಿದಂತೆ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಕಾಂಗ್ರೆಸ್ ಸಂಸದರು ಹಾಜರಾಗಿಲ್ಲ.
ಉಪಹಾರ ಸಭೆಗೆ ಗೈರಾದ ಪಕ್ಷದ ಹಿರಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ಪ್ರಮೋದ್ ತಿವಾರಿ ಅವರು ಪ್ರತಿಪಕ್ಷ ನಾಯಕರ ಸಭೆಯಲ್ಲಿ ಪಾಲ್ಗೊಂಡರು. ಸೋನಿಯಾ ಗಾಂಧಿ ಉತ್ತರ ಪ್ರದೇಶದಿಂದ ಕಾಂಗ್ರೆಸ್‌ನಿಂದ ಏಕೈಕ ಲೋಕಸಭಾ ಸಂಸದರಾಗಿದ್ದರೆ, ವಿರೋಧ ಪಕ್ಷ ಆರು ರಾಜ್ಯಸಭಾ ಸಂಸದರನ್ನು ಹೊಂದಿದೆ ಆದರೆ ಯಾರೂ ಇಂದು ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ಹಾಜರಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
ದ್ರೌಪದಿ ಮುರ್ಮು ಅವರು ಉತ್ತರ ಪ್ರದೇಶ, ರಾಜಸ್ಥಾನ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಸಿಕ್ಕಿಂನ ಸಂಸತ್ ಸದಸ್ಯರಿಗೆ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಉಪಹಾರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿದ್ದರು ಎಂದು ರಾಷ್ಟ್ರಪತಿ ಭವನ ಫೋಟೋವೊಂದನ್ನು ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


