ಎನ್ ಸಿಪಿ ಸಂಸದ ಫೈಜಲ್ ಮೊಹಮ್ಮದ್ ಅನರ್ಹತೆ ರದ್ದುಗೊಳಿಸಿದ ಲೋಕಸಭೆ
ಲೋಕಸಭೆ ಸಚಿವಾಲಯ ಮಾ.29 ರಂದು ಎನ್ ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಸದಸ್ಯತ್ವದ ಅನರ್ಹತೆಯನ್ನು ರದ್ದುಗೊಳಿಸಿದೆ.

ನವದೆಹಲಿ: ಲೋಕಸಭೆ ಸಚಿವಾಲಯ ಮಾ.29 ರಂದು ಎನ್ ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಸದಸ್ಯತ್ವದ ಅನರ್ಹತೆಯನ್ನು ರದ್ದುಗೊಳಿಸಿದೆ.
ಕ್ರಿಮಿನಲ್ ಪ್ರಕರಣವೊಂದರಲ್ಲಿ ಮೊಹಮ್ಮದ್ ಫೈಜಲ್ ಗೆ 10 ವರ್ಷಗಳ ಶಿಕ್ಷೆಯಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಜನವರಿ ತಿಂಗಳಲ್ಲಿ ಅನರ್ಹಗೊಳಿಸಲಾಗಿತ್ತು.
ಫೈಜಲ್ ಲಕ್ಷದ್ವೀಪವನ್ನು ಪ್ರತಿನಿಧಿಸುತ್ತಿದ್ದು, ತಮಗೆ 10 ವರ್ಷಗಳ ಶಿಕ್ಷೆ ಪ್ರಕಟಿಸಿರುವುದನ್ನು ಪ್ರಶ್ನಿಸಿ ಸೆಷನ್ಸ್ ಕೋರ್ಟ್ ಆದೇಶದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದರು. ಹಾಗೂ ಪ್ರಕಟವಾಗಿದ್ದ ಶಿಕ್ಷೆಯನ್ನು ಹೈಕೋರ್ಟ್ ಅಮಾನತು ಮಾಡಿತ್ತು.
"25.01.2023 ರಲ್ಲಿ ಹೈಕೋರ್ಟ್ ನ ಆದೇಶದ ಹಿನ್ನೆಲೆಯಲ್ಲಿ ಮೊಹಮ್ಮದ್ ಫೈಜಲ್ ಅವರ ಅನರ್ಹತೆಯನ್ನು ಮುಂದಿನ ನ್ಯಾಯಾಂಗದ ಆದೇಶದವರೆಗೆ ರದ್ದುಗೊಳಿಸಲಾಗಿದೆ" ಎಂದು ಲೋಕಸಭಾ ಕಾರ್ಯದರ್ಶಿಗಳು ಅಧಿಸೂಚನೆಯ ಮೂಲಕ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


