'ದಿ ಎಲಿಫೆಂಟ್ ವಿಸ್ಪರರ್ಸ್' ಚಿತ್ರತಂಡವನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ದಿ ಎಲಿಫೆಂಟ್ ವಿಸ್ಪರರ್ಸ್' ಅನ್ನು ತಯಾರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ನಿರ್ಮಾಪಕಿ ಗುನೀತ್ ಮೊಂಗಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿಯಾದರು.

ನವದೆಹಲಿ: ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ದಿ ಎಲಿಫೆಂಟ್ ವಿಸ್ಪರರ್ಸ್' ಅನ್ನು ತಯಾರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ನಿರ್ಮಾಪಕಿ ಗುನೀತ್ ಮೊಂಗಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿಯಾದರು.
'ದಿ ಎಲಿಫೆಂಟ್ ವಿಸ್ಪರರ್ಸ್' ಸಿನಿಮಾದ ತೇಜಸ್ಸು ಮತ್ತು ಯಶಸ್ಸು ಜಾಗತಿಕ ಗಮನವನ್ನು ಮತ್ತು ಮೆಚ್ಚುಗೆಯನ್ನು ಗಳಿಸಿದೆ. ಇಂದು, ಅದಕ್ಕೆ ಸಂಬಂಧಿಸಿದ ಅದ್ಭುತ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಅವರು ಭಾರತವನ್ನು ತುಂಬಾ ಹೆಮ್ಮೆ ಪಡುವಂತೆ ಮಾಡಿದ್ದಾರೆ' ಎಂದು ಇಬ್ಬರು ಮಹಿಳೆಯರನ್ನು ಭೇಟಿಯಾದ ನಂತರ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದರೆ, ಗುನೀತ್ ಮೊಂಗಾ ಅದನ್ನು ನಿರ್ಮಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ನಡೆದ 95ನೇ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಸಾಕ್ಷ್ಯಚಿತ್ರ ವಿಭಾಗದಲ್ಲಿ 'ದಿ ಎಲಿಫೆಂಟ್ ವಿಸ್ಪರರ್ಸ್' ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಈ ಸಾಕ್ಷ್ಯಚಿತ್ರವು ದಂಪತಿ ಮತ್ತು ಅವರ ಆರೈಕೆಗೆ ಒಪ್ಪಿಸಲಾದ ಅನಾಥ ಆನೆ ಮರಿ ಆನೆ ರಘು ನಡುವೆ ಬೆಳೆಯುವ ಬಾಂಧವ್ಯದ ಕುರಿತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


