ಮಹತ್ವದ ಕಾರ್ಯಾಚರಣೆ: ಭಯೋತ್ಪಾದಕ ರಹಸ್ಯ ಸಂದೇಶಗಳಿಗೆ ಬಳಕೆ; 14 ಆ್ಯಪ್‌ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ
ಭಯೋತ್ಪಾದಕ ರಹಸ್ಯ ಸಂದೇಶಗಳಿಗೆ ಬಳಕೆ ಮಾಡಲಾಗುತ್ತಿದ್ದ ಆರೋಪದ ಮೇರೆಗೆ 14 ಆ್ಯಪ್‌ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.

ನವದೆಹಲಿ: ಭಯೋತ್ಪಾದಕ ರಹಸ್ಯ ಸಂದೇಶಗಳಿಗೆ ಬಳಕೆ ಮಾಡಲಾಗುತ್ತಿದ್ದ ಆರೋಪದ ಮೇರೆಗೆ 14 ಆ್ಯಪ್‌ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.
ಹೌದು.. ಪಾಕಿಸ್ತಾನದ ಉಗ್ರರಿಗೆ ರಹಸ್ಯ ಸಂದೇಶ ಕಳುಹಿಸಲು ಜಮ್ಮು& ಕಾಶ್ಮೀರದ ಕಣಿವೆ ಪ್ರದೇಶದ ಭಯೋತ್ಪಾದಕ ಗುಂಪುಗಳು ಬಳಸುತ್ತಿದ್ದ 14 ಮೆಸೆಂಜರ್ ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಸೋಮವಾರ ನಿರ್ಬಂಧಿಸಿದೆ.
ಮೂಲಗಳ ಪ್ರಕಾರ ಎನಿಗ್ಮಾ (Enigma), ಸೇಫ್‌ವಿಸ್ (Safeswiss), ವಿಕ್ರ್ಮೆ(Wickrme), ಮೀಡಿಯಾಫೈರ್(Mediafire), ಕ್ರಿಪ್‌ವೈಸರ್(Crypviser), ಬ್ರಿಯಾರ್(Briar), ಬಿಚಾಟ್(BChat), ನಂಡ್‌ಬಾಕ್ಸ್(Nandbox), ಕೊನಿಯನ್(Conion), ಐಎಂಒ(IMO), ಜಂಗಿ(Zangi), ಥ್ರೀಮಾ (Threema) ಎಲಿಮೆಂಟ್ (Element) ಮತ್ತು ಸೆಕೆಂಡ್ ಲೈನ್ (Second Line) ಆ್ಯಪ್ ಗಳನ್ನು ನಿಷೇಧಿಸಿದೆ. ಈ ಆ್ಯಪ್ ಗಳು ಕಣಿವೆಯಲ್ಲಿ ಭಯೋತ್ಪಾದಕ ಕುರಿತಾದ ಪ್ರಚಾರವನ್ನು ಮಾಡುತ್ತಿತ್ತು. ಈ ಆ್ಯಪ್‌ಗಳ ಮೂಲಕ ಉಗ್ರರು ರಹಸ್ಯ ಸಂದೇಶಗಳನ್ನು ಕಣಿವೆಯಲ್ಲಿರುವ ತನ್ನ ಕಾರ್ಯಕರ್ತರಿಗೆ ಕಳುಹಿಸುತ್ತಿದ್ದರು ಎಂದು ವರದಿ ತಿಳಿಸಿದೆ.
ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದ್ದು, ಈ ಆ್ಯಪ್‌ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ಇದ್ದ ಒಬ್ಬ ಮಗನನ್ನು ಕಳೆದುಕೊಂಡ ನಡುವಯಸ್ಸಿನ ದಂಪತಿಗೆ ಬಾಡಿಗೆ ತಾಯ್ತನ ಮೂಲಕ ಮಗು ಪಡೆಯಲು ಹೈಕೋರ್ಟ್ ಸಮ್ಮತಿ!
ದೇಶದ ಭದ್ರತೆಗೆ ಧಕ್ಕೆ ತರುವ ಮೊಬೈಲ್ ಅಪ್ಲಿಕೇಷನ್ ಗಳ ಮೇಲೆ ನಿಷೇಧ ಹೇರಿರುವುದು ಇದೇ ಮೊದಲಲ್ಲ. ಈ ಹಿಂದೆ ಚೀನಾದ ಹಲವು ಅಪ್ಲಿಕೇಷನ್ ಗಳನ್ನು ಸರ್ಕಾರ ನಿಷೇಧಿಸಿದೆ. ಟಿಕ್ ಟಾಕ್, ಶೇರ್ ಚಾಟ್, ಹೆಲೋ, ಲೈಕಿ, ಯುಸಿ ನ್ಯೂಸ್, ಬಿಗೋ ಲೈವ್, ಯುಸಿ ಬ್ರೌಸರ್, ಜೆಂಡರ್, ಕ್ಯಾಮ್ ಸ್ಕ್ಯಾನರ್, ಪಬ್ ಜಿ, ಫ್ರೀ ಫೈರ್ ನಂತರ ಜನಪ್ರಿಯ ಮುಂತಾದ ಜನಪ್ರಿಯ ಮೊಬೈಲ್ ಗೇಮ್, ಹಾಗೂ ಆ್ಯಪ್ ಸೇರಿದಂತೆ 200 ಕ್ಕೂ ಹೆಚ್ಚು ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


