ದೇಶ

ಕೋವಿಡ್ ಪ್ರಕರಣಗಳ ಇಳಿಕೆ; ದೇಶದಲ್ಲಿಂದು 4,282 ಹೊಸ ಪ್ರಕರಣ ಪತ್ತೆ, 14 ಮಂದಿ ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,282 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 47,246ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಕೋವಿಡ್ ಪ್ರಕರಣಗಳ ಇಳಿಕೆ; ದೇಶದಲ್ಲಿಂದು 4,282 ಹೊಸ ಪ್ರಕರಣ ಪತ್ತೆ, 14 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Published On :

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ  4,282 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 6,037 ಮಂದಿ ಸೋಂಕಿನಿಂತ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 47,246ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ ಆರು ಮಂದಿ ಸೇರಿದಂತೆ ಇಂದು 14 ಮಂದಿ ಮೃತಪಟ್ಟಿದ್ದು, ಈವರೆಗೆ ಒಟ್ಟು 5,31,547 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 4.92ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 4.00ರಷ್ಟಿದೆ. ದೇಶದಲ್ಲಿ ಈವರೆಗೆ 4,49,49,671 ಮಂದಿ ಸೋಂಕಿತರಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ. ಇದೇ ವೇಳೆ ದೇಶದಾದ್ಯಂತ ಈವರೆಗೆ 4,43,70,878 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ. ಎಂದು ಸಚಿವಾಲಯ ತಿಳಿಸಿದೆ.

ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಲಾಗಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 220.66 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.