ಕೇಂದ್ರದ ಎಲ್ಲಾ ಪರೀಕ್ಷೆಗಳು ಪ್ರಾದೇಶಿಕ ಭಾಷೆಯಲ್ಲಿ ನಡೆಸುವಂತೆ ತಮಿಳುನಾಡು ಸಿಎಂ ಆಗ್ರಹ
ಕೇಂದ್ರ ಸರ್ಕಾರದ ಎಲ್ಲ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಒತ್ತಾಯಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಸಿಗಬೇಕು ಎಂದು...

ಚೆನ್ನೈ: ಕೇಂದ್ರ ಸರ್ಕಾರದ ಎಲ್ಲ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಒತ್ತಾಯಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಸಿಗಬೇಕು ಎಂದು ಹೇಳಿದ್ದಾರೆ.
ಮುಂದಿನ ವರ್ಷದಿಂದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಕೇಂದ್ರದ ನಿರ್ಧಾರವನ್ನು ಸ್ಟಾಲಿನ್ ಸ್ವಾಗತಿಸಿದ್ದಾರೆ.
"ಎಲ್ಲಾ ಕೇಂದ್ರ ಸರ್ಕಾರದ ಪರೀಕ್ಷೆಗಳನ್ನು ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ನಾವು ಒತ್ತಾಯಿಸುತ್ತೇವೆ" ಎಂದು ಸ್ಟಾಲಿನ್ ಅವರು ಸೋಮವಾರ 'ಉಂಗಲಿನ್ ಒರುವನ್' ವೀಡಿಯೊ ಸರಣಿಯಲ್ಲಿ ಹೇಳಿದ್ದಾರೆ.
ಆದಷ್ಟು ಬೇಗ ಕೇಂದ್ರ ಎಲ್ಲಾ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಯಲ್ಲಿ ನಡೆಸಬೇಕು. ಇದು ಸಂಸತ್ತು, ರಾಜ್ಯ ಶಾಸಕಾಂಗ ಮತ್ತು ಜನತಾ ವೇದಿಕೆಯಲ್ಲಿ ಡಿಎಂಕೆಯ ಬಹುಕಾಲದ ಬೇಡಿಕೆಯಾಗಿದೆ. ಇದರೊಂದಿಗೆ ಕೇವಲ ತಮಿಳುನಾಡಿನ ಯುವಕರು ಮಾತ್ರವಲ್ಲದೆ ಭಾರತದ ಅನೇಕ ರಾಜ್ಯಗಳ ಯುವಕರು ತಮ್ಮ ಭಾಷೆಗಳಲ್ಲಿ ಪರೀಕ್ಷೆಗಳನ್ನು ಬರೆಯಬಹುದು. ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಸುವುದರಿಂದ ಹಲವು ರಾಜ್ಯಗಳ ಯುವಕರು ಅವಕಾಶ ವಂಚಿತರಾಗುತ್ತಾರೆ” ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


