ಕೊಳಗೇರಿಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನ
ಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ರಾತ್ರಿ ಸಂಭವಿಸಿದ ಕೊಳಗೇರಿ ಬೆಂಕಿ ಅವಘಡದಲ್ಲಿ ಇತರ ಏಳು ಜನರಿಗೆ ಸುಟ್ಟ ಗಾಯಗಳಾಗಿದ್ದು, ಜಿಲ್ಲೆಯ ಶ್ರೀಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಎಸ್‌ಕೆಎಂಸಿಎಚ್) ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದರು.
ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಂಕಿಯಲ್ಲಿ ಮೃತಪಟ್ಟ ನಾಲ್ವರು ಬಾಲಕಿಯರು ಮೂರರಿಂದ 12 ವರ್ಷದೊಳಗಿನವರಾಗಿದ್ದು, ನರೇಶ್ ರಾಮ್ ಎಂಬ ವ್ಯಕ್ತಿಯ ಪುತ್ರಿಯರೆಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸೋಮವಾರ ರಾತ್ರಿ 10.30ರ ಸುಮಾರಿಗೆ ಜುಗ್ಗಿಯಲ್ಲಿ ಈ ಘಟನೆ ನಡೆದಿದೆ ಎಂದು ಮುಶಾರಿ (ಮುಜಾಫರ್‌ಪುರ) ವೃತ್ತಾಧಿಕಾರಿ ಸುಧಾಂಶು ಶೇಖರ್ ತಿಳಿಸಿದ್ದಾರೆ.
ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸ್ವಲ್ಪ ಸಮಯದ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದರು.
ಗಾಯಾಳುಗಳು ಸೇರಿದಂತೆ ಪ್ರತಿ ಸಂತ್ರಸ್ತರ ಸಂಬಂಧಿಕರಿಗೆ 4 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡುವ ಪ್ರಕ್ರಿಯೆಯನ್ನು ಆಡಳಿತವು ಪ್ರಾರಂಭಿಸಿದೆ ಎಂದು ಶೇಖರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


