ಸಚಿನ್ ಪೈಲಟ್ ಪ್ರಕಾರ '...ಆಗ ಮಾತ್ರ ಬಿಜೆಪಿ ಸೋಲಿಸಲು ಸಾಧ್ಯ'!
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಜೋಡಿ ನಾಯಕತ್ವದಡಿ ದೇಶದಲ್ಲಿ ಭದ್ರವಾಗಿ ನೆಲೆಯೂರಿರುವ ಬಿಜೆಪಿಯನ್ನು ಯಾವಾಗ ಸೋಲಿಸಬಹುದು ಎಂಬುದನ್ನು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.

ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಜೋಡಿ ನಾಯಕತ್ವದಡಿ ದೇಶದಲ್ಲಿ ಭದ್ರವಾಗಿ ನೆಲೆಯೂರಿರುವ ಬಿಜೆಪಿಯನ್ನು ಯಾವಾಗ ಸೋಲಿಸಬಹುದು ಎಂಬುದನ್ನು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.
ರಾಜ್ಯಗಳಲ್ಲಿ ಬಿಜೆಪಿಯನ್ನು ಸೋಲಿಸಿದಾಗ ಮಾತ್ರ ರಾಷ್ಟ್ರಮಟ್ಟದಲ್ಲಿ ಆ ಪಕ್ಷವನ್ನು ಸೋಲಿಸಲು ಸಾಧ್ಯ ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಪೈಲಟ್, ಇದನ್ನು ಸಾಧಿಸಲು "ಎಲ್ಲರೂ" ಒಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದ್ದಾರೆ.
"ವಿವಿಧ ರಾಜ್ಯಗಳಲ್ಲಿ ಬಿಜೆಪಿಯನ್ನು ಸೋಲಿಸುವುದು ಅಗತ್ಯವಾಗಿದೆ. ನಾವು ರಾಜ್ಯಗಳಲ್ಲಿ ಬಿಜೆಪಿಯನ್ನು ಸೋಲಿಸಿದಾಗ ಮಾತ್ರ ನಾವು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯನ್ನು ಸೋಲಿಸಬಹುದು. ಅದಕ್ಕಾಗಿಯೇ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ" ಎಂದು ಅವರು ಹೇಳಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪೈಲಟ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಕೆಲವೇ ತಿಂಗಳುಗಳಲ್ಲಿ ಈ ರಾಜ್ಯಗಳಲ್ಲಿ ರಾಜಕೀಯ ಸಭೆಗಳು ಪ್ರಾರಂಭವಾಗಲಿವೆ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಪರಸ್ಪರ ಸೌಹಾರ್ದತೆ, ಸಹೋದರತ್ವ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


