ಚಾರ್'ಧಾಮ್ ಯಾತ್ರೆ 2023: ಹಿಮಪಾತದಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ, ಆರೆಂಜ್ ಅಲರ್ಟ್ ಘೋಷಣೆ
ಕೇದಾರನಾಥದಲ್ಲಿ ಕಳೆದ 2 ದಿನಗಳಿಂದ ನಿರಂತರ ಹಿಮಪಾತವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 3ರಂದು ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ನವದೆಹಲಿ: ಕೇದಾರನಾಥದಲ್ಲಿ ಕಳೆದ 2 ದಿನಗಳಿಂದ ನಿರಂತರ ಹಿಮಪಾತವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 3ರಂದು ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಿಮಪಾತದಿಂದ ಕೇದಾರನಾಥದಲ್ಲಿ ಚಳಿ ಹೆಚ್ಚಾಗಿದ್ದು, ಇದರಿಂದಾಗಿ ಅಲ್ಲಿಗೆ ಯಾತ್ರೆಗೆ ಹೋಗುವವರಿಗೂ ಸಮಸ್ಯೆಗಳು ಎದುರಾಗಿವೆ. ಹಿಮಪಾತ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಉಳಿದುಕೊಳ್ಳುವಂತೆ ಯಾತ್ರಾರ್ಥಿಗಳಿಗೆ ಸಲಹೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಏಪ್ರಿಲ್ 30ರವರೆಗೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಹಿಮಪಾತ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರಿಕರ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೋಂದಣಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ರುದ್ರಪ್ರಯಾಗ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮಯೂರ್ ದೀಕ್ಷಿತ್ ತಿಳಿಸಿದ್ದಾರೆ.
ರಿಷಿಕೇಶದಲ್ಲಿರುವ ಪ್ರಯಾಣಿಕರ ನೋಂದಣಿ ಕೇಂದ್ರದಲ್ಲಿ ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಧಾಮಕ್ಕೆ ಮಾತ್ರ ನೋಂದಣಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಹವಾಮಾನ ಇಲಾಖೆಯು ಮುಂದಿನ 2-3 ದಿನಗಳ ಕಾಲ ಹಿಮಾಲಯದ ಎತ್ತರದ ಪ್ರದೇಶಗಳಲ್ಲಿ ಮಳೆ ಮತ್ತು ಹಿಮಪಾತದ ಎಚ್ಚರಿಕೆಯನ್ನು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


