ದೆಹಲಿ: ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು- ಪೊಲೀಸರ ನಡುವೆ ಘರ್ಷಣೆ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ ನಲ್ಲಿ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಡರಾತ್ರಿ ಘರ್ಷಣೆ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ ನಲ್ಲಿ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಡರಾತ್ರಿ ಘರ್ಷಣೆ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಇದನ್ನೂ ಓದಿ: ಬ್ರಿಜ್ಭೂಷಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಯಾವುದೇ ತನಿಖೆ ಮಾಡುತ್ತಿಲ್ಲ: 'ಸುಪ್ರೀಂ'ಗೆ ಕುಸ್ತಿಪಟುಗಳ ಹೇಳಿಕೆ
ಈ ಸಂದರ್ಭದಲ್ಲಿ ಮಾತನಾಡಿರುವ ಕುಸ್ತಿಪಟು ಬಜರಂಗ್ ಫುನಿಯಾ, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರು ನಮ್ಮ ಮೇಲೆ ಬಲ ಪ್ರಯೋಗ ಮಾಡಿದ್ದಾರೆ. ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ. ನಮಗೆ ಇಡೀ ದೇಶದ ಬೆಂಬಲದ ಅಗತ್ಯವಿದೆ. ಎಲ್ಲರೂ ದೆಹಲಿಗೆ ಬರಬೇಕು ಎಂದು ಮನವಿ ಮಾಡಿದರು.
ಘರ್ಷಣೆ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ಪ್ರಣವ್ ತಾಯಲ್, ಆಪ್ ನಾಯಕ ಸೋಮನಾಥ್ ಭಾರ್ತಿ ಅನುಮತಿಯಿಲ್ಲದೆ ಮಡಿಸುವ ಹಾಸಿಗೆ ಸಮೇತ ಪ್ರತಿಭಟನಾ ಸ್ಥಳಕ್ಕೆ ಬಂದಾಗ ಪೊಲೀಸರು ಮಧ್ಯ ಪ್ರವೇಶಿಸಿದರು. ಆಗ ಉದ್ರಿಕ್ತರಾದ ಪ್ರತಿಭಟನಾಕಾರರು ಟ್ರಕ್ ನಿಂದ ಬೆಡ್ ಗಳನ್ನು ಹೊರತೆಗೆಯಲು ಪ್ರಯತ್ನಿಸಿದರು. ತದನಂತರ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಸೋಮನಾಥ್ ಭಾರ್ತಿ ಅವರೊಂದಿಗೆ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


