ದೇಶ

ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳ ಪ್ರತಿಭಟನೆ: ರೈತರು, ವಿದ್ಯಾರ್ಥಿಗಳು ಭಾಗಿ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಳೆದ 14 ದಿನಗಳಿಂದ ಕುಸ್ತಿ ಪಟುಗಳು ಜಂತರ್...

ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳ ಪ್ರತಿಭಟನೆ: ರೈತರು, ವಿದ್ಯಾರ್ಥಿಗಳು ಭಾಗಿ
ಜಂತರ್ ಮಂತರ್ ಗೆ ತೆರಳುತ್ತಿರುವ ರೈತರು
Published On :

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಳೆದ 14 ದಿನಗಳಿಂದ ಕುಸ್ತಿ ಪಟುಗಳು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿ ನೆರೆಯ ರಾಜ್ಯಗಳ ರೈತರು ಮತ್ತು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಸಮಾಜದ ವಿವಿಧ ಹಂತಗಳ ಜನ ಗುರುವಾರ ಜಂತರ್ ಮಂತರ್ ಆಗಮಿಸಿ, ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಕುಸ್ತಿಪಟುಗಳಿಗೆ ಬೆಂಬಲ ನೀಡಿದ್ದಾರೆ.

ಕುಸ್ತಿಪಟುಗಳು ಮತ್ತು ದೆಹಲಿ ಪೊಲೀಸ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದ ಒಂದು ದಿನದ ನಂತರ ರೈತರು ಮತ್ತು ವಿದ್ಯಾರ್ಥಿಗಳು ಕುಸ್ತಿಪಟುಗಳನ್ನು ಬೆಂಬಲಿಸಿ ಘೋಷಣೆ ಕೂಗಿದರು.

ಕುಸ್ತಿಪಟು ಬಜರಂಗ್ ಪುನಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ರೈತರು ಮತ್ತು ರೈತರ ಸಂಘಟನೆಗಳ ಮುಖಂಡರು ಗುರುವಾರ ಬೆಳಗ್ಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ನೂರಾರು ರೈತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.