ಕಿರುಕುಳ ಪ್ರಕರಣ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹೈಕೋರ್ಟ್
ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲಾಗಿರುವ ಅಂಕಿತಾ ದತ್ತಾ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಸ್ಸಾಂ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಗುವಾಹಟಿ: ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲಾಗಿರುವ ಅಂಕಿತಾ ದತ್ತಾ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಸ್ಸಾಂ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಅರ್ಜಿದಾರರಿಗೆ ಬಂಧಿತ ಪೂರ್ವ ಜಾಮೀನು ನೀಡುವುದು ಸೂಕ್ತವಲ್ಲಾ. ಆದ್ದರಿಂದ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಅಜಿತ್ ಬೋರ್ತಕೂರ್ ಅವರಿದ್ದ ನ್ಯಾಯಪೀಠ ಹೇಳಿತು.
ಏಪ್ರಿಲ್ 26 ರಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಶ್ರೀನಿವಾಸ್, ದತ್ತಾ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು, ಆದರೆ ಅದನ್ನು ನ್ಯಾಯಾಲಯ ತಿರಸ್ಕರಿಸಿತು. ನಂತರ ಅವರು ಬಂಧನ ಪೂರ್ವ ಜಾಮೀನು ಅರ್ಜಿಯನ್ನು ಸಲ್ಲಿಸಿದರು. ಶ್ರೀನಿವಾಸ್ ಕಳೆದ ಆರು ತಿಂಗಳಿಂದ ತನ್ನಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ದತ್ತಾ ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ ಬೆಂಗಳೂರಿನ ನ್ಯಾಯಾಲಯ ಶ್ರೀನಿವಾಸ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಗುವಾಹಟಿ ಪೊಲೀಸರ ಐವರು ಸದಸ್ಯರ ತಂಡ ಏಪ್ರಿಲ್ 23 ರಂದು ಬೆಂಗಳೂರಿನ ಶ್ರೀನಿವಾಸ್ ಅವರ ಸಂಬಂಧಿಕರ ಮನೆಗೆ ನೋಟಿಸ್ ಅಂಟಿಸಿ ಮೇ 2 ರೊಳಗೆ ದಿಸ್ಪುರ ಪೊಲೀಸ್ ಠಾಣೆಯಲ್ಲಿ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ಶ್ರೀನಿವಾಸ್ ವಿಚಾರಣೆಗೆ ಗೈರು ಹಾಜರಾಗಿದ್ದು, 10 ದಿನಗಳ ಕಾಲಾವಕಾಶ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


