ದೆಹಲಿ ಅಬಕಾರಿ ಹಗರಣ: ಇಡಿ ಸಲ್ಲಿಸಿದ ಹೊಸ ಚಾರ್ಜ್ ಶೀಟ್ ನಲ್ಲಿ ಸಿಸೋಡಿಯಾ ಆರೋಪಿ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಹೊಸ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್...

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಹೊಸ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಾಲ್ಕನೇ ಪೂರಕ ಮತ್ತು ಒಟ್ಟಾರೆ ಐದನೇ ಚಾರ್ಜ್ ಶೀಟ್ ಅನ್ನು ದೆಹಲಿ ವಿಶೇಷ ಪಿಎಂಎಲ್ಎ ನ್ಯಾಯಾಲಯದ ಮುಂದೆ ಸಲ್ಲಿಸಿದೆ.
ಸುಮಾರು 270 ಪುಟಗಳ ಚಾರ್ಜ್ ಶೀಟ್ ನಲ್ಲಿ ಸಿಸೋಡಿಯಾ ಅವರನ್ನು ‘ಪ್ರಮುಖ ಸಂಚುಕೋರ’ ಎಂದು ಇಡಿ ಆರೋಪಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ತಿಹಾರ್ ಜೈಲಿನಿಂದ ಬಂಧಿಸಿತ್ತು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
51 ವರ್ಷದ ಆಮ್ ಆದ್ಮಿ ಪಕ್ಷದ ನಾಯಕನನ್ನು ಮೊದಲು ಸಿಬಿಐ ಬಂಧಿಸಿದ್ದು, ಈ ಪ್ರಕರಣವನ್ನೂ ಸಹ ಕೇಂದ್ರ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


