ಸಂಸ್ಕೃತಕ್ಕೆ 640 ಕೋಟಿ ರೂ., ಕನ್ನಡಕ್ಕೆ ಕೇವಲ 3 ಕೋಟಿ ರೂ. ಏಕೆ: ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಬಿಜೆಪಿ ಎಲ್ಲಾ ಭಾಷೆಗಳನ್ನು ಉತ್ತೇಜಿಸುತ್ತದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಸಂಸ್ಕೃತಕ್ಕೆ 640 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ಸರ್ಕಾರ ಕನ್ನಡದ ಪ್ರಚಾರಕ್ಕಾಗಿ ಕೇವಲ 3 ಕೋಟಿ ರೂಪಾಯಿಗಳನ್ನು ಏಕೆ ಖರ್ಚು ಮಾಡಿದೆ ಎಂದು ಕೇಳಿದೆ.

ನವದೆಹಲಿ: ಬಿಜೆಪಿ ಎಲ್ಲಾ ಭಾಷೆಗಳನ್ನು ಉತ್ತೇಜಿಸುತ್ತದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಸಂಸ್ಕೃತಕ್ಕೆ 640 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ಸರ್ಕಾರ ಕನ್ನಡದ ಪ್ರಚಾರಕ್ಕಾಗಿ ಕೇವಲ 3 ಕೋಟಿ ರೂಪಾಯಿಗಳನ್ನು ಏಕೆ ಖರ್ಚು ಮಾಡಿದೆ ಎಂದು ಕೇಳಿದೆ.
ದೇಶದ ಆರು ಶಾಸ್ತ್ರೀಯ ಭಾಷೆಗಳಲ್ಲಿ ಕನ್ನಡವೂ ಒಂದಾಗಿದೆ.
ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ಉಸ್ತುವಾರಿ ಜೈರಾಮ್ ರಮೇಶ್, 'ಬಿಜೆಪಿಯು ಎಲ್ಲ ಭಾಷೆಗಳನ್ನು ಉತ್ತೇಜಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ... ಹಾಗಿದ್ದರೆ...
1. ಅದಕ್ಕಾಗಿಯೇ ಮೋದಿ ಸರ್ಕಾರ ಸಂಸ್ಕೃತವನ್ನು ಉತ್ತೇಜಿಸಲು 640 ಕೋಟಿ ರೂ. ಮತ್ತು ದೇಶದ ಆರು ಶಾಸ್ತ್ರೀಯ ಭಾಷೆಗಳಲ್ಲಿ ಒಂದಾದ ಕನ್ನಡವನ್ನು ಉತ್ತೇಜಿಸಲು ಕೇವಲ 3 ಕೋಟಿ ರೂ. ಖರ್ಚು ಮಾಡಿದೆ.
2. ಕರ್ನಾಟಕದ 40 ಪರ್ಸೆಂಟ್ ಕಮಿಷನ್ ಸರ್ಕಾರವು ಮಹಾನ್ ಕುವೆಂಪು ಅವರನ್ನು (ರಾಜ್ಯ ಗೀತೆ ಬರೆದವರು) ಅವಮಾನಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದೆಯೇ?
3. ಅದಕ್ಕಾಗಿಯೇ ಅರಣ್ಯ ಸಂರಕ್ಷಣಾ (ತಿದ್ದುಪಡಿ) ಮಸೂದೆ, 2022 ರೊಂದಿಗೆ ಕಾನೂನುಗಳ ಇಂಗ್ಲಿಷ್ ಹೆಸರುಗಳನ್ನು ತೊಡೆದುಹಾಕಲು ಮತ್ತು ಹಿಂದಿ ಹೆಸರುಗಳೊಂದಿಗೆ ಅವುಗಳನ್ನು ಬದಲಾಯಿಸುವ ಸಂಪ್ರದಾಯವನ್ನು ಪ್ರಾರಂಭಿಸಲಾಗಿದೆಯೇ? ಎಂದು ಜೈರಾಮ್ ರಮೇಶ್ ಸುದೀರ್ಘ ಟ್ವೀಟ್ ಮಾಡಿದ್ದಾರೆ.
ಬಿಜೆಪಿಯು ಎಲ್ಲಾ ಭಾರತೀಯ ಭಾಷೆಗಳ ಉತ್ತೇಜನಕ್ಕೆ ಬೆಂಬಲ ನೀಡುತ್ತದೆ ಮತ್ತು ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆಯನ್ನು ಉತ್ತೇಜಿಸುತ್ತದೆ ಎಂಬ ಆರೋಪವು 'ರಾಜಕೀಯ ಪ್ರೇರಿತ' ಎಂದು ಸಂದರ್ಶನವೊಂದರಲ್ಲಿ ಅಮಿತ್ ಶಾ ಹೇಳಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ನಡುವೆ ಎರಡೂ ಪಕ್ಷಗಳು ಆಕ್ರಮಣಕಾರಿ ಪ್ರಚಾರದಲ್ಲಿ ತೊಡಗಿರುವ ಮಧ್ಯೆಯೇ ಕಾಂಗ್ರೆಸ್ ಕನ್ನಡದ ಮೇಲೆ ಹಿಂದಿ ಹೇರಿಕೆ ಬಗ್ಗೆ ಪ್ರಶ್ನೆ ಮಾಡಿದೆ.
224 ಸದಸ್ಯ ಬಲದ ವಿಧಾನಸಭೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ಕರ್ನಾಟಕದಲ್ಲಿ ಬಜರಂಗದಳವನ್ನು ನಿಷೇಧಿಸುವ ನಿರ್ಧಾರದ ಮೇಲೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


