ಕೋವಿಡ್-19: ದೇಶದಲ್ಲಿಂದು 2,380 ಹೊಸ ಪ್ರಕರಣಗಳು ಪತ್ತೆ, 15 ಮಂದಿ ಸಾವು
ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,380 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 27,212 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,380 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 27,212 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೇಶದಾದ್ಯಂತ 15 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 5,31,659 ಕ್ಕೆ ಏರಿಕೆಯಾಗಿದೆ. ಈವರೆಗೆ 4,49,69,630 ಮಂದಿಗೆ ಕೋವಿಡ್ ತಗುಲಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06 ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.75 ರಷ್ಟಿದೆ. ಸದ್ಯ ಈವರೆಗೆ ಒಟ್ಟು 4,44,10,738 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


