ತೆಲಂಗಾಣದಲ್ಲಿ ನಕ್ಸಲ್ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದ ಸೇನೆ
ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ.

ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ.
ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ ಇಬ್ಬರು ನಕ್ಸಲರು ಹತ್ಯೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತರನ್ನು ಚೇರ್ಲಾ ಸಂಘಟನೆಯ ರಾಜೇಶ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಂದ ಎರಡು ಎಸ್‌ಎಲ್‌ಆರ್ ರೈಫಲ್ ಸೇರಿದಂತೆ ಕೆಲವು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚೆಗೆ ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರು ಸ್ಪೋಟಕ ಸಿಡಿಸಿ 11 ಪೊಲೀಸರನ್ನು ಕೊಂದಿದ್ದರು.
ತೆಲಂಗಾಣ-ಛತ್ತೀಸ್‌ಗಢ ಗಡಿಯಲ್ಲಿರುವ ಮಂಡಲದ ಪುಟ್ಟಪಾಡು ಅರಣ್ಯದಲ್ಲಿ ಗ್ರೇಹೌಂಡ್ಸ್ ಪಡೆಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರು ಉಪಸ್ಥಿತಿ ಕಂಡ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ನಕ್ಸಲರು ಹತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


