ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ
ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರ: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಸಂಭವಿಸಿದ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಗೋಲ್ಡನ್ ಟೆಂಪಲ್‌ಗೆ ಹೋಗುವ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಶನಿವಾರ ಸಂಭವಿಸಿದ ಸ್ಥಳದ ಸಮೀಪವೇ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಂದು ಬೆಳಗ್ಗೆ 6:30 ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಪೊಲೀಸರು ಮತ್ತು ಫೋರೆನ್ಸಿಕ್ ತಂಡಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ತನಿಖೆಗಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದು, ಈ ಎರಡು ಸ್ಫೋಟಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಶನಿವಾರದ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು ಮತ್ತು ಕೆಲವು ಕಟ್ಟಡಗಳು ಹಾನಿಗೊಳಗಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


