ಪಶ್ಚಿಮ ಬಂಗಾಳದಲ್ಲಿ ಏನಾದರೂ ಆದರೆ, ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ
ಬಂಗಾಳದಲ್ಲಿ ಏನಾದರೂ ಸಂಭವಿಸಿದರೆ ಬಂಗಾಳ ಸರ್ಕಾರವನ್ನು ದೂಷಿಸಲು ನೂರಾರು ಕೇಂದ್ರ ತಂಡಗಳನ್ನು ಕಳುಹಿಸಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಕೊಲ್ಕೋತಾ: ಬಂಗಾಳದಲ್ಲಿ ಏನಾದರೂ ಸಂಭವಿಸಿದರೆ ಬಂಗಾಳ ಸರ್ಕಾರವನ್ನು ದೂಷಿಸಲು ನೂರಾರು ಕೇಂದ್ರ ತಂಡಗಳನ್ನು ಕಳುಹಿಸಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಶಾನ್ಯ ರಾಜ್ಯವನ್ನು ಬೆಚ್ಚಿಬೀಳಿಸಿದ ಹಿಂಸಾಚಾರದ ಬಗ್ಗೆ ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಬಂಗಾಳದಲ್ಲಿ ಏನಾದರೂ ಸಂಭವಿಸಿದಾಗ, "ಬಂಗಾಳ ಸರ್ಕಾರವನ್ನು ದೂಷಿಸಲು" ನೂರಾರು ಕೇಂದ್ರ ತಂಡಗಳನ್ನು ಕಳುಹಿಸಲಾಗುತ್ತದೆ. ಬಂಗಾಳದಲ್ಲಿ ಏನಾದರೂ ಸಂಭವಿಸಿದಾಗ, ನಮ್ಮ ಮಾನಹಾನಿ ಮಾಡಲು ನೂರಾರು ಕೇಂದ್ರ ತಂಡಗಳನ್ನು ಇಲ್ಲಿಗೆ ಕಳುಹಿಸಲಾಗುತ್ತದೆ. ಆದರೆ ಮಣಿಪುರ ಬಿಜೆಪಿ ಆಡಳಿತದ ರಾಜ್ಯವಾಗಿರುವುದರಿಂದ ಏನೂ ಮಾಡಲಾಗುತ್ತಿಲ್ಲ. ಆದರೆ ಜನರು ಅಂಕಿಅಂಶಗಳನ್ನು ತಿಳಿದುಕೊಳ್ಳಲು ಬಯಸುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು.
ಕಂಡಲ್ಲಿ ಗುಂಡಿಕ್ಕುವ ಆದೇಶ ಮತ್ತು ಸಾಮಾನ್ಯ ಹಿಂಸಾಚಾರದಿಂದಾಗಿ ಎಷ್ಟು ಜನರು ಸಾವನ್ನಪ್ಪಿದ್ದಾರೆಂದು ನಮಗೆ ತಿಳಿದಿಲ್ಲ. ರಾಜ್ಯ ಸರಕಾರ ಅಂಕಿ ಅಂಶಗಳನ್ನು ಹೇಳುತ್ತಿಲ್ಲ. ಕೆಲವು ಸಮಯದ ಹಿಂದೆ ಅಲ್ಲಿ 60-70 ಸಾವುಗಳಾಗಿದೆ ಎಂದು ತಿಳಿದುಕೊಂಡೆ ಎಂದು ಮಮತಾ ಹೇಳಿದರು.
ಕಳೆದ ವಾರ ಮೈತೈ ಸಮುದಾಯದ ಸದಸ್ಯರು ಮತ್ತು ಬುಡಕಟ್ಟು ಜನಾಂಗದವರ ನಡುವೆ ಘರ್ಷಣೆ ನಡೆದ ನಂತರ ಮಣಿಪುರದಲ್ಲಿ ಅಸ್ಥಿರ ಪರಿಸ್ಥಿತಿಯ ಬಗ್ಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


