ಕೋವಿಡ್-19: ದೇಶದಲ್ಲಿಂದು 1,331 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,331 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,742 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,331 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,742 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಈಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,49,72,800 ಕ್ಕೆ ಏರಿಕೆಯಾಗಿದೆ. ಇವೇ ಅವಧಿಯಲ್ಲಿ ದೇಶದಾದ್ಯಂತ 11 ಮಂದಿ ಸಾವಿಗೀಡಾಗಿದ್ದು, ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,31,707 ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06ರಷ್ಟು ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ರಾಷ್ಟ್ರೀಯ ಚೇತರಿಕೆ ದರ ಶೇ 98.76 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈವರೆಗೆ 4,44,18,351 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೈನಂದಿನ ಮರಣ ಪ್ರಮಾಣ ಶೇ 1.18 ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ, ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


