ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೈಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಬುಧವಾರ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.
ಉದಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹ್ಲೋಟ್, 'ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಗೆಲ್ಲುತ್ತೇವೆ ಎಂದು ತೋರುತ್ತದೆ. ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಪ್ರತಿಪಾದಿಸಿದರು.
ಸಾರ್ವಜನಿಕರಲ್ಲಿ ಭಾವನೆಗಳು ಹುಟ್ಟಿಕೊಂಡಾಗ, ಸರ್ಕಾರ ರಚಿಸುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಅಮಿತ್ ಶಾ ಆಗಲಿ ಅಥವಾ ನರೇಂದ್ರ ಮೋದಿ ಆಗಲಿ ಯಾರೇ ಬಂದರೂ ಪರವಾಗಿಲ್ಲ ಎಂದರು.
ಈ ವರ್ಷದ ಕೊನೆಯಲ್ಲಿ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ತಮ್ಮ ಸರ್ಕಾರ ನಡೆಸುತ್ತಿರುವ ಹಣದುಬ್ಬರ ಪರಿಹಾರ ಶಿಬಿರಗಳನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ. ಯೋಜನೆಯ ಪ್ರಯೋಜನಗಳು ಪ್ರತಿ ಫಲಾನುಭವಿ ಕುಟುಂಬವನ್ನು ತಲುಪುವಂತೆ ಖಾತ್ರಿಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಉದಯಪುರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಗೆಹ್ಲೋಟ್ ಬರಮಾಡಿಕೊಂಡರು. ಅವರೊಂದಿಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರ ಕೂಡ ಉಪಸ್ಥಿತರಿದ್ದರು.
ಸಿರೋಹಿ ಜಿಲ್ಲೆಯ ಮೌಂಟ್ ಅಬುದಲ್ಲಿ ಕಾಂಗ್ರೆಸ್‌ನ ಸರ್ವೋದಯ ಸಂಗಮ ಶಿಬಿರದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


