ಶ್ರದ್ಧಾ ವಾಕರ್ ಹತ್ಯೆ ಪ್ರಕರಣ: ಅಫ್ತಾಬ್ ಪೂನಾವಾಲಾ ವಿರುದ್ಧ ಚಾರ್ಜ್ ಶೀಟ್; ಕೊಲೆ, ಸಾಕ್ಷ್ಯ ನಾಶ ಆರೋಪ
ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಕೊಲೆ, ಸಾಕ್ಷ್ಯಗಳ ನಾಶ ಮಾಡಿದ್ದಾರೆ ಎಂದು ದೆಹಲಿ ಕೋರ್ಟ್ ಆರೋಪ ಹೊರಿಸಿದೆ.

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಕೊಲೆ, ಸಾಕ್ಷ್ಯಗಳ ನಾಶ ಮಾಡಿದ್ದಾರೆ ಎಂದು ದೆಹಲಿ ಕೋರ್ಟ್ ಆರೋಪ ಹೊರಿಸಿದೆ.
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಕೋರ್ಟ್ ನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಕೊಲೆ, ಸಾಕ್ಷ್ಯಗಳ ನಾಶ ಮಾಡಿದ್ದಾರೆ ಎಂದು ದೆಹಲಿ ಕೋರ್ಟ್ ಆರೋಪ ಹೊರಿಸಿದೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯಗಳ ಕಣ್ಮರೆ) ಅಡಿಯಲ್ಲಿ ಕೊಲೆಗಾರ ಮತ್ತು ಸಾಕ್ಷ್ಯಗಳ ನಾಶ ಮಾಡಿದ್ದಾನೆ ಎಂದು ದೆಹಲಿಯ ಸಾಕೇತ್ ನ್ಯಾಯಾಲಯ ಆದೇಶ ನೀಡಿದೆ.
ಈ ಬಗ್ಗೆ ಜೂನ್ 1ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಇಂದು ಪೂನಾವಾಲಾ ಅವರನ್ನು ಸಾಕೇತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ಈ ಬಗ್ಗೆ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ಜೆ) ಮನಿಶಾ ಖುರಾನಾ ಕಕ್ಕರ್ ಅವರು ಆದೇಶವನ್ನು ಪ್ರಕಟಿಸಿದರು. ಮೇ 18, 2022ರಂದು ಶ್ರದ್ಧಾ ವಾಕರ್ ಅವರ ಕೊಲೆಯನ್ನು ಮಾಡಿದ್ದಾರೆ ಮತ್ತು ಸಾಕ್ಷ್ಯಗಳನ್ನು ನಾಶ ಮಾಡಿದಕ್ಕಾಗಿ ಅಪರಾಧವು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಅವರು ಹೇಳಿದರು. ಮೇ 18 ರಿಂದ ಅಕ್ಟೋಬರ್ 18ರ ನಡುವೆ, ಈ ಪ್ರಕರಣ ನಡೆದಿದೆ. ಇದರ ಜತೆಗೆ ಸಾಕ್ಷ್ಯವನ್ನು ನಾಶ ಮಾಡುವ ಉದ್ದೇಶದಿಂದ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ಚತ್ತರ್‌ಪುರ ಮತ್ತು ಇತರ ಸ್ಥಳಗಳಲ್ಲಿ ಆಕೆಯ ದೇಹದ ಭಾಗವನ್ನು ಎಸೆದಿರುವ ಬಗ್ಗೆ ದಾಖಲೆಗಳು ಉಲ್ಲೇಖಿಸಿದೆ ಎಂದು ಹೇಳಿದೆ.
ನ್ಯಾಯಾಲಯವು ಪೂನಾವಾಲಾ ಈ ಎಲ್ಲ ಆರೋಪವನ್ನು ಹೊರಿಸಿದೆ. ಈ ಬಗ್ಗೆ ಅವರು ಕೂಡ ಒಪ್ಪಿಕೊಳ್ಳಬೇಕು, ಇಲ್ಲವಾದರೆ ಇದನ್ನೂ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಹೇಳಿದೆ. ಈ ಪ್ರಕರಣದ ತನಿಖೆ ಸಂಪೂರ್ಣಗೊಂಡಿದ್ದು, ಜೂನ್ 1ರಂದು ಶ್ರದ್ಧಾ ವಾಕರ್ ಹತ್ಯೆ ಕುರಿತು ವಿಚಾರಣೆ ನಡೆಸಲಿದೆ. ಜನವರಿಯಲ್ಲಿ ದೆಹಲಿ ಪೊಲೀಸರು 75 ದಿನಗಳಲ್ಲಿ 6,636 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಆರೋಪಪಟ್ಟಿಯು 100 ಸಾಕ್ಷ್ಯಗಳ ಜೊತೆಗೆ ವಿಧಿವಿಜ್ಞಾನ ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಒಳಗೊಂಡಿರುತ್ತದೆ.
ಪೂನಾವಾಲಾ ವಿರುದ್ಧ ಐಪಿಸಿಯ ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷ್ಯಗಳು ಕಣ್ಮರೆಯಾಗಲು ಕಾರಣ) ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ. ಚಾರ್ಜ್‌ಶೀಟ್ ಪ್ರಕಾರ, ಪೂನಾವಾಲಾ ಕಳೆದ ವರ್ಷ ಮೇ 18 ರಂದು ತನ್ನ ಲಿವ್-ಇನ್ ಪಾಲುದಾರ ವಾಲ್ಕರ್‌ನನ್ನು ಕತ್ತು ಹಿಸುಕಿ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದು, ಅದನ್ನು ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ ಫ್ರಿಜ್‌ನಲ್ಲಿ ಇರಿಸಿದ್ದನು. ನಂತರ ಆ ದೇಹದ ಭಾಗಗಳನ್ನು ದೆಹಲಿಯ ಬೇರೆ ಬೇರೆ ಪ್ರದೇಶಗಳಲ್ಲಿ ಎಸೆಯಲಾಗಿದೆ ಎಂದು ತನಿಖಾ ವರದಿಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


