ದೇಶ

ಪಂಜಾಬ್‌: ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ, ಐವರ ಬಂಧನ

ಪಂಜಾಬ್ ನ ಅಮೃತಸರದ ಹೆರಿಟೇಜ್ ಸ್ಟ್ರೀಟ್‌ ಬಳಿ ಗುರುವಾರ ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ಮತ್ತೊಂದು ಸ್ಫೋಟ ಸಂಭವಿಸಿದ್ದು, ಕಳೆದ ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ.

ಪಂಜಾಬ್‌: ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ, ಐವರ ಬಂಧನ
ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ
Published On :

ಅಮೃತಸರ: ಪಂಜಾಬ್ ನ ಅಮೃತಸರದ ಹೆರಿಟೇಜ್ ಸ್ಟ್ರೀಟ್‌ ಬಳಿ ಗುರುವಾರ ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ಮತ್ತೊಂದು ಸ್ಫೋಟ ಸಂಭವಿಸಿದ್ದು, ಕಳೆದ ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ.

ಅಮೃತಸರದಲ್ಲಿ ಸರಣಿ ಬಾಂಬ್ ಸ್ಫೋಟದಿಂದ ಜನ ಆತಂಕಗೊಂಡಿದ್ದು, ಸ್ಫೋಟಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದಾರೆ. 

ಇಂದು ಸಂಭವಿಸಿದ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಮೇ 6 ರಂದು ಮೊದಲ ಸ್ಫೋಟ ಸಂಭವಿಸಿದ್ದು, ಕಳೆದ ಸೋಮವಾರ ಎರಡನೆ ಸ್ಫೋಟ ಸಂಭವಿಸಿದೆ. ಇಂದು ನಡೆದ ಕಡಿಮೆ ತೀವ್ರತೆಯ ಸ್ಫೋಟದ ಸ್ಥಳವು ನಗರದ ಜನಪ್ರಿಯ ಪ್ರವಾಸಿ ತಾಣವಾದ ಗೋಲ್ಡನ್ ಟೆಂಪಲ್ ಬಳಿಯ ಹೆರಿಟೇಜ್ ಸ್ಟ್ರೀಟ್‌ನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮತ್ತು ಪಂಜಾಬ್ ಪೊಲೀಸರು ಸ್ಫೋಟದ ಸ್ಥಳದಲ್ಲಿ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು. ಸ್ಥಳದಲ್ಲಿ ಯಾವುದೇ ಡಿಟೋನೇಟರ್ ಪತ್ತೆಯಾಗಿಲ್ಲ. ಆದರೆ ಸ್ಫೋಟಕ್ಕೆ ಬಳಸಿದ ಡಿಟೋನೇಟರ್ ಅನ್ನು ಕಂಟೇನರ್‌ನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.