CBSE 10ನೇ ತರಗತಿ ಫಲಿತಾಂಶ ಪ್ರಕಟ: ಶೇ.93.12 ರಷ್ಟು ವಿದ್ಯಾರ್ಥಿಗಳು ತೇರ್ಗಡೆ, ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ
12ನೇ ತರಗತಿ ಫಲಿತಾಂಶ ಪ್ರಕಟ ಬೆನ್ನಲ್ಲೇ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ CBSEಯ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಶುಕ್ರವಾರ 10 ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಿದ್ದು, ಇದರಲ್ಲಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಶೇಕಡಾ 94.25 ಫಲಿತಾಂಶದೊಂದಿಗೆ ಬಾಲಕಿಯರು ಮತ್ತೊಮ್ಮೆ ಮೇಲುಗೈ ಸಾಧಿಸಿದ್ದು, ಬಾಲಕರು ಶೇಕಡಾ 92.27ರಷ್ಟು ಮಂದಿ ತೇರ್ಗಡೆ ಹೊಂದಿದ್ದಾರೆ. 10 ನೇ ತರಗತಿ ಪರೀಕ್ಷೆಯಲ್ಲಿ ಸುಮಾರು ಶೇಕಡಾ 90ರಷ್ಟು ತೃತೀಯಲಿಂಗ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ವರ್ಷ ದೇಶಾದ್ಯಂತ 21,65,805 ವಿದ್ಯಾರ್ಥಿಗಳು CBSE 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 20,16,779 ಮಂದಿ ಉತ್ತೀರ್ಣರಾಗಿದ್ದಾರೆ. 1,95,799 ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ ಎಂದು ಸಿಬಿಎಸ್‌ಇ ತಿಳಿಸಿದೆ. ಒಟ್ಟು ಶೇಕಡಾ 2 ರಷ್ಟು ವಿದ್ಯಾರ್ಥಿಗಳು (44,297) ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.
CBSE ಪ್ರಕಾರ, ತಿರುವನಂತಪುರಂ ಪ್ರದೇಶವು 99.91 ಶೇಕಡಾ ಉತ್ತೀರ್ಣತೆಯೊಂದಿಗೆ ದೇಶದಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು 99.18 ಶೇಕಡಾದೊಂದಿಗೆ ಎರಡನೇ ಸ್ಥಾನದಲ್ಲಿದೆ. 99.14ರಷ್ಟು ಉತ್ತೀರ್ಣರಾಗುವ ಮೂಲಕ ಚೆನ್ನೈ ವಿಭಾಗ ಮೂರನೇ ಸ್ಥಾನದಲ್ಲಿದೆ.
ಈ ವರ್ಷ 'ವಿಶೇಷ ಅಗತ್ಯವುಳ್ಳ ಮಕ್ಕಳು' ವಿಭಾಗದಲ್ಲಿ 278 ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದರೆ, ಈ ವಿಭಾಗದ 58 ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.
ಅಲ್ಲದೆ, ಒಟ್ಟು 1,34,774 ವಿದ್ಯಾರ್ಥಿಗಳು ಕಂಪಾರ್ಟ್‌ಮೆಂಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. CBSE 10ನೇ ತರಗತಿ ಫಲಿತಾಂಶ ನೋಡಲು cbse.gov.in ಮತ್ತು cbse.nic.in ನಲ್ಲಿ ಪರಿಶೀಲಿಸಬಹುದು.
ಫಲಿತಾಂಶಗಳನ್ನು ಪರಿಶೀಲಿಸಲು cbseresults.nic.in, results.cbse.nic.in, digilocker.gov.in ಮತ್ತು results.gov.in. ವೆಬ್‌ಸೈಟ್‌ಗಳನ್ನು ನೋಡಬಹುದು. ಫಲಿತಾಂಶಗಳನ್ನು ಮೊಬೈಲ್ ಅಪ್ಲಿಕೇಷನ್- ಡಿಜಿಲಾಕರ್ ಮತ್ತು ಉಮಾಂಗ್ ನಲ್ಲಿ ಕೂಡ ನೋಡಬಹುದು.
ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿ ಅವರ ಮುಂದಿನ ಪಯಣ ಯಶಸ್ವಿಯಾಗಿರಲಿ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


