ಡಬ್ಲ್ಯೂಎಫ್ ಐ ಮುಖ್ಯಸ್ಥನ ಹೇಳಿಕೆ ದಾಖಲಿಸಿಕೊಂಡ ದೆಹಲಿ ಪೊಲೀಸರು
ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿಕೆಯನ್ನು ದಾಖಲಿಸಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಶರಣ್ ಸಿಂಗ್ ಅವರಿಂದ ಕೆಲವು ದಾಖಲೆಗಳನ್ನು ಕೇಳಲಾಗಿದ್ದು, ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿಕೆಯನ್ನು ದಾಖಲಿಸಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಶರಣ್ ಸಿಂಗ್ ಅವರಿಂದ ಕೆಲವು ದಾಖಲೆಗಳನ್ನು ಕೇಳಲಾಗಿದ್ದು, ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಮಹಿಳಾ ಪೊಲೀಸ್ ಅಧಿಕಾರಿಗಳು ಸೇರಿದಂತೆ ಆರು ಪೊಲೀಸ್ ತಂಡಗಳೊಂದಿಗೆ ಎಸ್‌ಐಟಿ ರಚಿಸಲಾಗಿದೆ. ಮಹಿಳಾ ಡಿಸಿಪಿ ನೇತೃತ್ವದಲ್ಲಿ 10 ಜನರ ತಂಡ ರಚಿಸಲಾಗಿತ್ತು. ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ಹೇಳಿಕೆಗಳನ್ನೂ ಸಹ ದಾಖಲಿಸಲಾಗಿದೆ. ದೆಹಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ವಿನೋದ್ ತೋಮರ್ ಕೂಡ ಆರೋಪಿಯಾಗಿದ್ದಾರೆ.
ಬ್ರಿಜ್ ಭೂಷಣ್ ಅವರ ಸ್ಪಷ್ಟೀಕರಣಕ್ಕಾಗಿ ಕೆಲವು ವಿಡಿಯೋ ಸಾಕ್ಷ್ಯಗಳು ಮತ್ತು ಮೊಬೈಲ್ ಡೇಟಾವನ್ನು ಸಂಗ್ರಹಿಸಲು ಸೂಚಿಸಲಾಗಿದೆ. ಎಸ್ಐಟಿ ಬ್ರಿಜ್ ಭೂಷಣ್ ಅವರನ್ನು ಮತ್ತಷ್ಟು ವಿಚಾರಣೆ ನಡೆಸಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಸ್ತಿಪಟುಗಳ ದೂರಿನ ಮೇರೆಗೆ ದೆಹಲಿ ಪೊಲೀಸ್ ತಂಡಗಳು ಉತ್ತರ ಪ್ರದೇಶ, ಜಾರ್ಖಂಡ್, ಕರ್ನಾಟಕ ಮತ್ತು ಹರಿಯಾಣಕ್ಕೆ ತೆರಳಿ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. "ದೇಶದ ಹೊರಗಡೆಯೂ ಆರೋಪ ಕೇಳಿಬಂದಿದ್ದು ದೆಹಲಿ ಪೊಲೀಸರು ಸಂಬಂಧಪಟ್ಟ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


