''ಕೋಮುವಾದಿ ವಿಡಿಯೋ"ನಿರ್ಬಂಧಿಸಲು ಟ್ವಿಟರ್, ಗೂಗಲ್ ಗೆ ದೆಹಲಿ ಹೈಕೋರ್ಟ್ ನಿರ್ದೇಶನ
ಮುಸ್ಲಿಂ ವ್ಯಕ್ತಿಯೊಬ್ಬ ಮಹಿಳೆಯನ್ನು ಇಸ್ಲಾಂಗೆ ಮತಾಂತರಗೊಳಿಸುವಂತೆ ಒತ್ತಾಯಿಸಿದ ಸುದ್ದಿ ವರದಿಗಳು ಮತ್ತು ವಿಡಿಯೋ ಲಿಂಕ್‌ಗಳನ್ನು ನಿರ್ಬಂಧಿಸುವಂತೆ ದೆಹಲಿ ಹೈಕೋರ್ಟ್ ಕೆಲವು ಮಾಧ್ಯಮ ಸಂಸ್ಥೆಗಳು ಮತ್ತು ಟ್ವಿಟರ್ ಮತ್ತು ಗೂಗಲ್ ಮತ್ತಿತರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿರ್ದೇಶನ ನೀಡಿದೆ.

ನವದೆಹಲಿ: ಮುಸ್ಲಿಂ ವ್ಯಕ್ತಿಯೊಬ್ಬ ಮಹಿಳೆಯನ್ನು ಇಸ್ಲಾಂಗೆ ಮತಾಂತರಗೊಳಿಸುವಂತೆ ಒತ್ತಾಯಿಸಿದ ಸುದ್ದಿ ವರದಿಗಳು ಮತ್ತು ವಿಡಿಯೋ ಲಿಂಕ್‌ಗಳನ್ನು ನಿರ್ಬಂಧಿಸುವಂತೆ ದೆಹಲಿ ಹೈಕೋರ್ಟ್ ಕೆಲವು ಮಾಧ್ಯಮ ಸಂಸ್ಥೆಗಳು ಮತ್ತು ಟ್ವಿಟರ್ ಮತ್ತು ಗೂಗಲ್ ಮತ್ತಿತರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿರ್ದೇಶನ ನೀಡಿದೆ.
ಆನ್‌ಲೈನ್‌ನಲ್ಲಿ ಹಾಕಲಾಗಿರುವ ಸುದ್ದಿ ಮತ್ತು ವೀಡಿಯೊಗಳ ಕುರಿತು ವೀಕ್ಷಕರು ಮಾಡುತ್ತಿರುವ ಕಾಮೆಂಟ್‌ಗಳಿಂದ ತೀವ್ರ ಬೆದರಿಕೆ ಇದೆ ಎಂಬುದನ್ನು ಪರಿಗಣಿಸಿ ನ್ಯಾಯಮೂರ್ತಿ ಪ್ರತಿಬಾ ಎಂ ಸಿಂಗ್ ಈ ಆದೇಶ ಹೊರಡಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ, ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ ಮತ್ತು ಗೂಗಲ್ ಎಲ್ ಎಲ್ ಸಿ ಮತ್ತು ಟ್ವಿಟರ್ ಇಂಕ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸುದರ್ಶನ್ ನ್ಯೂಸ್‌ನ ಅಧ್ಯಕ್ಷ ಸುರೇಶ್ ಚವ್ಹಾಂಕೆ, ಒಡಿಶಾ ಟೆಲಿವಿಷನ್ ಲಿಮಿಟೆಡ್, ಪಿಟ್ಟಿ ಮೀಡಿಯಾ ಎಲ್ ಎಲ್ ಪಿ, ವಾಯ್ಸ್ ಆಫ್ ದಿ ನೇಷನ್ ಮಾಲೀಕರಾದ ಭಾರತ್ ಪ್ರಕಾಶನ (ದೆಹಲಿ) ಲಿಮಿಟೆಡ್ ಗೂ ನೋಟಿಸ್ ನೀಡಲಾಗಿದೆ.
ಅತ್ಯಾಚಾರ ಪ್ರಕರಣವನ್ನು ಎದುರಿಸುತ್ತಿರುವ ಪುರುಷ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸಲು ಕಕ್ಷಿದಾರರಿಗೆ ಹೈಕೋರ್ಟ್ ಸೂಚಿಸಿದ್ದು, ಮೇ 24 ರಂದು ಹೆಚ್ಚಿನ ವಿಚಾರಣೆಯನ್ನು ನಿಗದಿಪಡಿಸಿದೆ.
ಖ್ಯಾತ ಶಾಸ್ತ್ರೀಯ ಸಂಗೀತ ಶಿಕ್ಷಕನೆಂದು ಹೇಳಿಕೊಳ್ಳುವ ಅರ್ಜಿದಾರ ಅಜ್ಮತ್ ಅಲಿ ಖಾನ್, ತನ್ನ ವಿರುದ್ಧ ದೆಹಲಿ ಮಹಿಳೆ ಏಪ್ರಿಲ್ 19 ರಂದು ದಾಖಲಿಸಿರುವ ಎಫ್ ಐಆರ್ ಕುರಿತು ಆನ್‌ಲೈನ್ ಗಳಲ್ಲಿ ಪ್ರಸಾರವಾದ ಸುದ್ದಿಗಳು ಮತ್ತು ವಿಡಿಯೋಗಳನ್ನು ತೆಗೆದುಹಾಕಬೇಕು ಎಂದು ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


