ಉಪ ಚುನಾವಣೆ: ಜಲಂಧರ್ ಲೋಕಸಭಾ ಕ್ಷೇತ್ರದಲ್ಲಿ ಎಎಪಿ, ಜಾರ್ಸುಗುಡ ವಿಧಾನಸಭೆಯಲ್ಲಿ ಬಿಜೆಡಿ ಮುನ್ನಡೆ
ಜಲಂಧರ್ ಲೋಕಸಭೆ ಉಪ ಚುನಾವಣೆಯಲ್ಲಿ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಎಎಪಿ ಅಭ್ಯರ್ಥಿ ಸುಶೀಲ್ ರಿಂಕು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕರಮ್‌ಜಿತ್ ಕೌರ್ ಚೌಧರಿ ಅವರಿಗಿಂತ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.

ನವದೆಹಲಿ: ಜಲಂಧರ್ ಲೋಕಸಭೆ ಉಪ ಚುನಾವಣೆಯಲ್ಲಿ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಎಎಪಿ ಅಭ್ಯರ್ಥಿ ಸುಶೀಲ್ ರಿಂಕು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕರಮ್‌ಜಿತ್ ಕೌರ್ ಚೌಧರಿ ಅವರಿಗಿಂತ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.
ಚಲಾವಣೆಯಾದ 8.87 ಲಕ್ಷ ಮತಗಳ ಪೈಕಿ 7.10 ಲಕ್ಷಕ್ಕೂ ಹೆಚ್ಚು ಮತಗಳ ಎಣಿಕೆ ಪೂರ್ಣಗೊಂಡಿದೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಒಡಿಶಾದ ಜಾರ್ಸುಗುಡ ವಿಧಾನಸಭಾ ಕ್ಷೇತ್ರಕ್ಕೆ ಶನಿವಾರ ನಡೆದ ಉಪಚುನಾವಣೆಯ 16ನೇ ಸುತ್ತಿನ ಮತ ಎಣಿಕೆಯ ನಂತರ ಆಡಳಿತಾರೂಢ ಬಿಜೆಡಿ ಅಭ್ಯರ್ಥಿ ದಿಪಾಲಿ ದಾಸ್ ಅವರು ಬಿಜೆಪಿಯ ಪ್ರತಿಸ್ಪರ್ಧಿ ಟಂಕಧರ್ ತ್ರಿಪಾಠಿ ಅವರಿಗಿಂತ 42,395 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ದಿಪಾಲಿ ದಾಸ್ 94,326 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 51,931 ಮತಗಳನ್ನು ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ತರುಣ್ ಪಾಂಡೆ 4,133 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ ಎಂದು ಚುಣಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


