ದೇಶ

ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಗೆ ಬಜರಂಗ ಬಲಿ ಗದಾ ಪ್ರಹಾರ- ಸಂಜಯ್ ರಾವತ್

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೋಲು ಎಂದು ಕರೆದಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಬಜರಂಗ ಬಲಿ ಬಿಜೆಪಿಗೆ ಗದಾ ಪ್ರಹಾರ ಮಾಡಿದೆ ಎಂದಿದ್ದಾರೆ.

ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಗೆ ಬಜರಂಗ ಬಲಿ ಗದಾ ಪ್ರಹಾರ- ಸಂಜಯ್ ರಾವತ್
ಸಂಜಯ್ ರಾವತ್
Published On :

ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೋಲು ಎಂದು ಕರೆದಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಬಜರಂಗ ಬಲಿ ಬಿಜೆಪಿಗೆ ಗದಾ ಪ್ರಹಾರ ಮಾಡಿದೆ ಎಂದಿದ್ದಾರೆ. 

ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಪ್ರಚಾರದ ವೇಳೆಯಲ್ಲಿ ಬಜರಂಗ ದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಜೈ ಬಜರಂಗ ಬಲಿ ಘೋಷಣೆ ಕೂಗಿ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡಿದ್ದರು. ಆದ್ದರಿಂದ ಈ ಚುನಾವಣಾ ಫಲಿತಾಂಶದಲ್ಲಿ ಮೋದಿ ಹಾಗೂ ಅಮಿತ್ ಶಾ ಅವರ ಸೋಲಾಗಿದೆ ಎಂದರು.

ಕರ್ನಾಟಕದಲ್ಲಿ ಏನು ನಡೆದಿದೆಯೋ ಅದು 2024 ರ ಲೋಕಸಭೆ ಚುನಾವಣೆಯಲ್ಲಿ ನಿಖರವಾಗಿ ನಡೆಯಲಿದೆ ಎಂದು ಹೇಳಿದರು. "ಕರ್ನಾಟಕ ಚುನಾವಣಾ ಫಲಿತಾಂಶಗಳು ಮುಂದಿನ ವರ್ಷದ ಲೋಕಸಭಾ ಚುನಾವಣೆಯ ಫಲಿತಾಂಶಗಳಿಗೆ ದಿಕ್ಸೂಚಿಯಾಗಿದೆ ಎಂದು ಸಂಜಯ್ ರಾವತ್ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.