ಕರ್ನಾಟಕ ಫಲಿತಾಂಶ 2024ರ ಲೋಕಸಭಾ ಚುನಾವಣೆಯ ಚಿತ್ರಣ- ಶರದ್ ಪವಾರ್
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ 2024ರ ಲೋಕಸಭಾ ಚುನಾವಣೆಯ ಚಿತ್ರಣವನ್ನು ಪ್ರಸ್ತುತಪಡಿಸಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ 2024ರ ಲೋಕಸಭಾ ಚುನಾವಣೆಯ ಚಿತ್ರಣವನ್ನು ಪ್ರಸ್ತುತಪಡಿಸಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಕರ್ನಾಟಕ ಜನತೆ ಬಿಜೆಪಿ ವಿರುದ್ಧ ಕಠಿಣ ತೀರ್ಪು ನೀಡಿದ್ದಾರೆ ಎಂದು ಹೇಳುವ ಮೂಲಕ ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಪಾಠ ಕಲಿಸಿದ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಪ್ರಕ್ರಿಯೆ ದೇಶಾದ್ಯಂತ ನಡೆಯಲಿದೆ ಎಂದರು.
ಬಹುಮತ ಪಡೆದುಅಧಿಕಾರಕ್ಕೆ ಬರದ ಕಡೆಗಳಲ್ಲಿ ಶಾಸಕರನ್ನು ಖರೀದಿಸುವ ಮೂಲಕ ಸರ್ಕಾರವನ್ನು ಪತನಗೊಳಿಸುತ್ತಿದ್ದ ಬಿಜೆಪಿ, ಕರ್ನಾಟಕದಲ್ಲಿಯೂ ಅದೇ ರೀತಿಯಲ್ಲಿ ಮಾಡಿದೆ ಎಂದರು. ಬಿಜೆಪಿ ದೇಶದಲ್ಲಿ ಬಹುತೇಕ ರಾಜ್ಯಗಳನ್ನು ಕಳೆದುಕೊಳ್ಳುತ್ತಿದ್ದು, ಇದು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಚಿತ್ರಣವನ್ನು ತೋರಿಸಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


