ಕರ್ನಾಟಕದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಗೆ ಪ್ರಧಾನಿ ಮೋದಿ ಅಭಿನಂದನೆ
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ...

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
"ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲು ನನ್ನ ಶುಭಾಶಯಗಳು. ಕರ್ನಾಟಕ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ನಾವು ಕರ್ನಾಟಕದ ಸೇವೆ ಮಾಡುತ್ತೇವೆ’’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಬಹುಮತದ ಪಡೆದಿದೆ. ಬಿಜೆಪಿ 65 ಸ್ಥಾನಗಳು ಹಾಗೂ ಜೆಡಿಎಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಇತರರು ನಾಲ್ಕು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


