ದುರಹಂಕಾರ, ದ್ವೇಷ ಸೋಲಿಸಿದ ಕನ್ನಡಿಗರಿಗೆ ಧನ್ಯವಾದ: ರಘುರಾಮ್ ರಾಜನ್
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್...

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು, "ದುರಹಂಕಾರ, ದ್ವೇಷ ಮತ್ತು ಭ್ರಷ್ಟಾಚಾರವನ್ನು ಸೋಲಿಸಿದ್ದಕ್ಕಾಗಿ ಕನ್ನಡಿಗರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ದುರಂಕಾರ, ದ್ವೇಷ ಸೋಲಿಸಿ, ಸಹೋದರತ್ವ, ಕನ್ನಡದ ಹೆಮ್ಮೆ ಮತ್ತು ಪ್ರಗತಿಯನ್ನು ಸ್ವೀಕರಿಸಿದ್ದಕ್ಕಾಗಿ ಧನ್ಯವಾದಗಳು ಎಂದು ರಘುರಾಮ್ ರಾಜನ್ ಅವರು ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮವಾದ ಭಾರತ್ ಜೋಡೋ ಯಾತ್ರೆಯಲ್ಲಿ ರಾಜನ್ ಅವರು ರಾಹುಲ್ ಗಾಂಧಿ ಮತ್ತು ಸಚಿನ್ ಪೈಲಟ್ ಅವರೊಂದಿಗೆ ಹೆಜ್ಜೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.
ನೋಟು ಅಮಾನ್ಯೀಕರಣವನ್ನು ತೀವ್ರವಾಗಿ ಟೀಕಿಸಿದ್ದ ಮಾಜಿ ಆರ್‌ಬಿಐ ಮುಖ್ಯಸ್ಥ, ಈ ಹಿಂದೆ ಭಾರತದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


