ದೇಶ

ತಮಿಳುನಾಡು: ನಕಲಿ ಮದ್ಯ ಸೇವಿಸಿ ಮೂವರು ಸಾವು, 11 ಮಂದಿ ಆಸ್ಪತ್ರೆಗೆ ದಾಖಲು

ತಮಿಳುನಾಡಿನ ವಿಲ್ಲುಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಕ್ಕಿಯಾರ್ಕುಪ್ಪಂನ ಮೀನುಗಾರರು ವಾಸಿಸುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ತಮಿಳುನಾಡು: ನಕಲಿ ಮದ್ಯ ಸೇವಿಸಿ ಮೂವರು ಸಾವು, 11 ಮಂದಿ ಆಸ್ಪತ್ರೆಗೆ ದಾಖಲು
ಸಾಂದರ್ಭಿಕ ಚಿತ್ರ
Published On :

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಕ್ಕಿಯಾರ್ಕುಪ್ಪಂನ ಮೀನುಗಾರರು ವಾಸಿಸುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಶನಿವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಸ್ಥಳೀಯವಾಗಿ ತಯಾರಿಸಿದ ಮದ್ಯ ಸೇವಿಸಿದ ಜನರ ಗುಂಪೊಂದು ತಡರಾತ್ರಿ ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದು, ಅವರನ್ನು ಜಿಪ್ಮೆರ್ ನ ಜವಹರ್ ಲಾಲ್  ವೈದ್ಯಕೀಯ ಕಾಲೇಜಿಗೆ ಸೇರಿಸಲಾಗಿದೆ. ಈ ಪೈಕಿ ಮೂವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಇನ್ನೂ ಹದಿನೈದು ಮಂದಿ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಘಟನೆ ಬಗ್ಗೆ ದೂರು ಸ್ವೀಕರಿಸಿದ ತಕ್ಷಣ ಪೊಲೀಸರು ತನಿಖೆ ಆರಂಭಿಸಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವಿಲ್ಲುಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶ್ರೀನಾಥ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.