ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ: ಆರು ಮಹಿಳೆಯರ ದಾರುಣ ಸಾವು, ನಾಲ್ವರಿಗೆ ಗಂಭೀರ ಗಾಯ
ಆಟೋರಿಕ್ಷಾಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

ಆಂಧ್ರಪ್ರದೇಶ: ಆಟೋರಿಕ್ಷಾಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಇನ್ನೂ ನಾಲ್ವರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾಕಿನಾಡ ಸರ್ಕಾರಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಕಿನಾಡ ಜಿಲ್ಲೆಯ ತಲ್ಲರೇವು ಮಂಡಲದ ಸೀತಾರಾಮಪುರಂ ಬಳಿ ರಾಷ್ಟ್ರೀಯ ಹೆದ್ದಾರಿ 216ರಲ್ಲಿ ಅಪಘಾತ ಸಂಭವಿಸಿದೆ.
ಸಂತ್ರಸ್ತರು ಯಾನಂ ಪಟ್ಟಣದ ನೀಲಪಲ್ಲಿಯವರು. ಅವರೆಲ್ಲರೂ ಸೀಗಡಿ ಘಟಕದ ಉದ್ಯೋಗಿಗಳಾಗಿದ್ದರು. ಪೊಲೀಸರ ಪ್ರಕಾರ, ಅವರು ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅಪಘಾತ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಪಘಾತ ಹೇಗೆ ಸಂಭವಿಸಿತು ಎಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


