ಮಧ್ಯಪ್ರದೇಶ: ಮೂವರು ಅಪ್ರಾಪ್ತರಿಂದ 12 ವರ್ಷದ ಬಾಲಕನ ಭೀಕರ ಹತ್ಯೆ!
ಮೂವರು ಅಪ್ರಾಪ್ತ ಬಾಲಕರು- 12 ವರ್ಷದ ಮತ್ತೋರ್ವ ಬಾಲಕನನ್ನು ಹತ್ಯೆ ಮಾಡಿದ್ದಾರೆ.

ಭೋಪಾಲ್: ಮೂವರು ಅಪ್ರಾಪ್ತ ಬಾಲಕರು- 12 ವರ್ಷದ ಮತ್ತೋರ್ವ ಬಾಲಕನನ್ನು ಹತ್ಯೆ ಮಾಡಿದ್ದಾರೆ.
ಈ ಪೈಕಿ ಅತ್ಯಂತ ಕಿರಿಯ ಬಾಲಕ 11 ವರ್ಷದವನಿದ್ದಾನೆ. ಸೈಕಲ್ ಚೈನ್ ನಿಂದ ಹಲ್ಲೆ ನಡೆಸಿ ತಲೆಯನ್ನು ಕಲ್ಲಿನಿಂದ ಜಜ್ಜಿ, ಹರಿತವಾದ ಆಯುಧದಿಂದ ಬಾಲಕನ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯ ಬಳಿಕ ದೇಹವನ್ನು ಪಾಲಿಥಿನ್ ಬ್ಯಾಗ್ ನಲ್ಲಿ ಹಾಕಿ ಕಸದ ತೊಟ್ಟಿಗೆ ಎಸೆದಿದ್ದಾರೆ. ಆ ಪ್ರದೇಶದಲ್ಲಿ ಮಹಿಳೆಯೊಬ್ಬರು ರಕ್ತ ಸಿಕ್ತವಾದ ಬ್ಯಾಗ್ ನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಹಳೆ ಜಗಳವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೂವರು ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ಸುಧಾರಣಾ ಗೃಹಕ್ಕೆ ಕಳುಹಿಸಲಾಗಿದೆ. ಇಬ್ಬರು ಸಹೋದರರು ಸೇರಿದಂತೆ ಕ್ರಮವಾಗಿ 16, 14 ಮತ್ತು 11 ವರ್ಷ ವಯಸ್ಸಿನ ಮೂವರು 12 ವರ್ಷದ ಬಾಲಕನನ್ನು ಸಿಯೋನಿ ಜಿಲ್ಲಾ ಕೇಂದ್ರದಿಂದ 28 ಕಿಮೀ ದೂರದಲ್ಲಿರುವ ಮಗರ್‌ಕಥಾ ಗ್ರಾಮದ ನಿರ್ಜನ ಸ್ಥಳಕ್ಕೆ ಭಾನುವಾರ ಕರೆದಿದ್ದಾರೆ, "ಅವರು ಯೋಜಿಸಿ ಅಪರಾಧ ಕೃತ್ಯವನ್ನು ಎಸಗಿದ್ದಾರೆ ಎಂದು ಬರ್ಘಾಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರಸನ್ನ ಶರ್ಮಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


