ಈ ತಿಂಗಳ ಅಂತ್ಯಕ್ಕೆ ಹೊಸ ಸಂಸತ್ ಭವನ ಲೋಕಾರ್ಪಣೆ ಸಾಧ್ಯತೆ
ನೂತನ ಸಂಸತ್ ಭವನಕ್ಕೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಸಿದ್ಧಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ನವದೆಹಲಿ: ನೂತನ ಸಂಸತ್ ಭವನಕ್ಕೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಸಿದ್ಧಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಅವರ ಪ್ರಕಾರ, ಸಿವಿಲ್ ಕಟ್ಟಡಗಳ ಸ್ವಚ್ಛತೆ ಪ್ರಾರಂಭವಾಗಿದೆ ಮತ್ತು ಹೊಸ ಕಟ್ಟಡದ ಉದ್ಘಾಟನೆಯ ಬಗ್ಗೆ ಇನ್ನೂ ಸರ್ಕಾರದಿಂದ ಯಾವುದೇ ಮಾಹಿತಿ ಇಲ್ಲ. ಎರಡು ವರ್ಷಗಳ ಹಿಂದೆ ನೂತನ ಸಂಸತ್ ಭವನದ ನಿರ್ಮಾಣ ಕಾರ್ಯ ಆರಂಭವಾಗಿತ್ತು.
ಇದನ್ನು ಓದಿ: ಜನವರಿ ಅಂತ್ಯಕ್ಕೆ ಹೊಸ ಸಂಸತ್ ಭವನ ಸಿದ್ಧ
ಸೆಂಟ್ರಲ್ ವಿಸ್ತಾ ಯೋಜನೆ ಭಾಗವಾಗಿ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್ ಭವನ ಇದಾಗಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ನಡೆಯುತ್ತಿವೆ.
ಸುಮಾರು 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2020 ರಲ್ಲಿ ಈ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್ ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್‌ಲೈನ್ ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


