'ಲೇಡಿ ಸಿಂಗಂ' ಖ್ಯಾತಿಯ ವಿವಾದಾತ್ಮಕ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಸಾವು!
ಅಸ್ಸಾಂನಲ್ಲಿ ಲೇಡಿ ಸಿಂಗಂ, ದಬಾಂಗ್ ಕಾಪ್ ಎಂದು ಖ್ಯಾತಿಯಾಗಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು.

ನಾಗೂನ್: ಅಸ್ಸಾಂನಲ್ಲಿ ಲೇಡಿ ಸಿಂಗಂ, ದಬಾಂಗ್ ಕಾಪ್ ಎಂದು ಖ್ಯಾತಿಯಾಗಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು.
ನಾಗೂನ್ ನಗರದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಅವರು ಒಬ್ಬರೇ ಇದ್ದರು ಎನ್ನಲಾಗಿದ್ದು ಪೊಲೀಸ್ ಸಮವಸ್ತ್ರದಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಜುನ್ಮೋನಿ ರಾಭಾ ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಎಸ್‌ಐ ಆಗಿ ಕೆಲಸ ಮಾಡುತ್ತಿದ್ದರು. ವಿವಾದಗಳಿಂದಾಗಿ ಅವರು ಹಲವು ಸಲ ಅಮಾನತುಗೊಂಡಿದ್ದರು. ಹಲವು ಕಷ್ಟಕರ ಪ್ರಕರಣಗಳನ್ನು ಧೈರ್ಯವಾಗಿ ಎದುರಿಸಿದ್ದ ಅವರು, ಉದ್ಯೋಗದ ಹೆಸರಿನಲ್ಲಿ ವಂಚಿಸಿದ್ದ ಭಾವಿ ಪತಿಯನ್ನು ಬಂಧಿಸಿ ಪ್ರಶಂಸೆ ಪಡೆದಿದ್ದರು.
ಅಸ್ಸಾಂ ಪೊಲೀಸ್ ಅಧಿಕಾರಿಗಳು ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಜುನ್ಮೋನಿ ರಾಭಾ ಅವರು ಬಾಲಿವುಡ್ ಸಿನಿಮಾಗಳ ನಂತರ ಲೇಡಿ ಸಿಂಗಂ, ದಬಾಂಗ್ ಕಾಪ್ ಎಂದು ಜನಪ್ರಿಯತೆ ಗಳಿಸಿದ್ದರು. ಜೊತೆಗೆ ವಿವಾದಗಳ ಕಾರಣಕ್ಕೂ ಸುದ್ದಿಯಾಗಿದ್ದರು.
ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಂಟೈನರ್ ಟ್ರಕ್ ವಶಪಡಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಸಬ್ ಇನ್ಸ್ ಪೆಕ್ಟರ್ ರಾಭಾ ಒಬ್ಬರೇ ಎಲ್ಲಿಗೆ ಹೋಗುತ್ತಿದ್ದರು ಎಂಬುದು ಮನೆಯವರಿಗಾಗಲಿ, ಪೊಲೀಸರಿಗಾಗಲಿ ಗೊತ್ತಿಲ್ಲ. ರಾಭಾ ಮೊರಿಕೊಲೊಂಗ್ ಪೊಲೀಸ್ ಪೋಸ್ಟ್‌ನ ಉಸ್ತುವಾರಿ ವಹಿಸಿದ್ದರು. ಜುನ್ಮೋನಿ ರಾಭಾ ಅವರ ಸಾವು ನಿಗೂಢ ಎಂದು ಬಣ್ಣಿಸಿರುವ ಕುಟುಂಬವು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


