ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ತಮಿಳುನಾಡು ಪಿಎಚ್‌ಡಿ ವಿದ್ಯಾರ್ಥಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
5 ರಿಂದ 18 ವರ್ಷದೊಳಗಿನ ಎಂಟು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿನಕ್ಕೊಳಗಾಗಿರುವ ತಮಿಳುನಾಡಿನ 35 ವರ್ಷದ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ...

ನವದೆಹಲಿ: 5 ರಿಂದ 18 ವರ್ಷದೊಳಗಿನ ಎಂಟು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿನಕ್ಕೊಳಗಾಗಿರುವ ತಮಿಳುನಾಡಿನ 35 ವರ್ಷದ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಶುಕ್ರವಾರ ಅಧಿಕಾರಿಗಳು ಹೇಳಿದ್ದಾರೆ.
ತಮಿಳುನಾಡಿನ ತಂಜಾವೂರಿನ ಪೋಕ್ಸೊ(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯಕ್ಕೆ ಸಿಬಿಐ ಇತ್ತೀಚೆಗೆ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ, ಆರೋಪಿ ವಿಕ್ಟರ್ ಜೇಮ್ಸ್ ರಾಜಾ ಕಳೆದ ನಾಲ್ಕು ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ಆರೋಪಿಸಿದೆ.
ಇದನ್ನು ಓದಿ: ಲಂಚ ಪ್ರಕರಣ: ಸಿಬಿಐ ವಿಚಾರಣೆಗೆ ಸಮೀರ್ ವಾಂಖೆಡೆ ಗೈರು
"ಆರೋಪಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಫೋಟೋಗಳು ಹಾಗೂ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಇತರ ವಯಸ್ಕರೊಂದಿಗಿನ ಲೈಂಗಿಕ ಕ್ರಿಯೆಗಳನ್ನು ವೀಕ್ಷಿಸುವಂತೆ ಅವರ ಮೇಲೆ ಒತ್ತಡ ಹಾಕಿದ್ದಾನೆ” ಎಂದು ಸಿಬಿಐ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಟರ್‌ಪೋಲ್‌ನ ದತ್ತಾಂಶ ಸಂಗ್ರಹಣೆಯಿಂದ ಈ ಚಿತ್ರಗಳು ಹಾಗೂ ವಿಡಿಯೋಗಳು ಸಿಬಿಐಗೆ ದೊರಕಿದ್ದವು. ನಂತರ ಡಿಜಿಟಲ್ ವಿಧಿವಿಜ್ಞಾನ ಉಪಕರಣಗಳನ್ನು ಬಳಸಿಕೊಂಡು ನಡೆಸಿದ ತನಿಖೆಯಿಂದ ತಂಜಾವೂರಿನ ಈ ಕಾಮುಕನ ಕೃತ್ಯ ಬೆಳಕಿಗೆ ಬಂದಿತ್ತು.
ಕೃತ್ಯಕ್ಕೆ ಬಳಸಲಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಆರೋಪಿಗೆ ಸಂಬಂಧಿಸಿದ ಜಾಗಗಳಲ್ಲಿ ಶೋಧ ನಡೆಸಿ ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


