ರಾಹುಲ್ ಗಾಂಧಿ ಅಮೆರಿಕ ಪ್ರವಾಸ ಮೇ 28 ಕ್ಕೆ ಮರು ನಿಗದಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ 31 ರಂದು 10 ದಿನಗಳ ಕಾಲ ಅಮೆರಿಕ ಪ್ರವಾಸ ನಿಗದಿಯಾಗಿತ್ತು. ಆದರೆ, ಇದೀಗ ಮೇ 28 ರಂದೇ ಅವರು ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ 31 ರಂದು 10 ದಿನಗಳ ಕಾಲ ಅಮೆರಿಕ ಪ್ರವಾಸ ನಿಗದಿಯಾಗಿತ್ತು. ಆದರೆ, ಇದೀಗ ಮೇ 28 ರಂದೇ ಅವರು ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ಮೇ 29-30 ರಂದು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದು, ಅನಿವಾಸಿ ಭಾರತೀಯರನ್ನು ಭೇಟಿಯಾಗಲಿದ್ದಾರೆ.
ರಾಹುಲ್ ಗಾಂಧಿ ಮಾರ್ಚ್ ನಲ್ಲಿ ಲಂಡನ್ ನಿಂದ ಹಿಂತಿರುಗಿದ ನಂತರ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಮಾಡಿದ್ದ ಭಾಷಣಕ್ಕಾಗಿ ಆಡಳಿತಾರೂಢ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದರು. ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ಎದುರಿಸುತ್ತಿದ್ದೇವೆ ಎಂದು ಹೇಳಿದ್ದರು. ಅದಕ್ಕೆ ಅವರು ಕ್ಷಮೆಯಾಚಿಸುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದರು.
ಜೂನ್ 4 ರಂದು ರಾಹುಲ್ ಗಾಂಧಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರ್‍ಯಾಲಿ ನಡೆಸಲಿದ್ದಾರೆ. ಇದರಲ್ಲಿ ಸುಮಾರು 5,000 ಅನಿವಾಸಿ ಭಾರತೀಯರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


